ಕಾಳೇಶ್ವರಂ ಯೋಜನೆಯ ಭಾಗವಾಗಿ ಮೇಡಿಗಡ್ಡ ಬ್ಯಾರೇಜ್ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಮತ್ತು ಇತರರ ವಿರುದ್ಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ವ್ಯಕ್ತಿಯೊಬ್ಬರು ಬುಧವಾರ ಜಯಶಂಕರ್ ಭೂಪಾಲಪಲ್ಲಿ ಪಟ್ಟಣದಲ್ಲಿ ಕೊಲೆಯಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೌದು ರಾಜಲಿಂಗಮೂರ್ತಿ ಬುಧವಾರ ರಾತ್ರಿ ಬೈಕ್ನಲ್ಲಿ ಹೋಗುತ್ತಿದ್ದಾಗ ಭೂ ವಿವಾದದ ಹಿನ್ನೆಲೆ ಇಬ್ಬರು ಆರೋಪಿಗಳು ಚಾಕುವಿನಿಂದ ಇರಿದಿದ್ದಾರೆ. ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೇಡಿಗಡ್ಡ ಬ್ಯಾರೇಜ್ನ ಕೆಲವು ಕಂಬಗಳು ಮುಳುಗಿದ ನಂತರ ಕೆಸಿಆರ್ ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಿಸಲು ರಾಜಲಿಂಗಮೂರ್ತಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಕೆಸಿಆರ್, ಅವರ ಸೋದರಳಿಯ ಮತ್ತು ಮಾಜಿ ಸಚಿವ ಟಿ.ಹರೀಶ್ ರಾವ್ ತಮ್ಮ ವಿರುದ್ಧದ ಅರ್ಜಿ ವಜಾಗೊಳಿಸಲು ತೆಲಂಗಾಣ ಹೈಕೋರ್ಟ್ ಮೊರೆ ಹೋಗಿದ್ದರು.