ಬಾಲಿವುಡ್ ನಟ ಶಾರುಖ್ ಖಾನ್ ಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಛತ್ತೀಸ್ಗಢದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾರುಖ್ ಖಾನ್ ಗೆ ಕರೆ ಮಾಡಿ 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಕ್ಕಾಗಿ ಮೊಹಮ್ಮದ್ ಫೈಜಾನ್ ಖಾನ್ ಎಂಬ ವಕೀಲನನ್ನು ಛತ್ತೀಸ್ಗಢದ ರಾಯ್ಪುರದ ಆತನ ನಿವಾಸದಲ್ಲಿ ಬಂಧಿಸಲಾಗಿದೆ.
ಫೈಜಾನ್ ಖಾನ್ ಗೆ ಈ ಹಿಂದೆ ಪೊಲೀಸರ ಮುಂದೆ ಹಾಜರಾಗಲು ಸೂಚಿಸಲಾಗಿತ್ತು. ಆದರೆ ಆತ ಹಾಜರಾಗದ ಕಾರಣ ಇದೀಗ ಆತನನ್ನು ಬಂಧಿಸಲಾಗಿದೆ. ಕಳೆದ ವಾರ ಬೆದರಿಕೆ ಕರೆ ಮಾಡಲು ಬಳಸಲಾದ ತನ್ನ ಮೊಬೈಲ್ ಫೋನ್ನ್ನು ಯಾರೋ ಕದ್ದಿದ್ದಾರೆ ಎಂದು ಅವರು ಹೇಳಿದ್ದರು. ನವೆಂಬರ್ 2 ರಂದು ಪೊಲೀಸ್ ಕೇಸ್ ದಾಖಲಿಸಿದ್ದೇನೆ ಎಂದಿದ್ದರು.
ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಸೆಕ್ಷನ್ 308(4) (ಸಾವಿನ ಬೆದರಿಕೆ ಅಥವಾ ಗಂಭೀರ ಗಾಯದ ಬೆದರಿಕೆಗಳನ್ನು ಒಳಗೊಂಡ ಸುಲಿಗೆ) ಮತ್ತು 351(3)(4) (ಅಪರಾಧ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕಳೆದ ಅಕ್ಟೋಬರ್ನಲ್ಲಿ ಕೊಲೆ ಬೆದರಿಕೆ ಬಂದಿತ್ತು, ಇದಾದ ಬಳಿಕ ಶಾರುಖ್ಗೆ ವೈಪ್ಲಸ್ ಭದ್ರತೆ ಕಲ್ಪಿಸಲಾಗತ್ತು. ಕಳೆದ ವಾರ, ಸಲ್ಮಾನ್ ಖಾನ್ಗೆ ಜೀವ ಬೆದರಿಕೆ ಹಾಕಿದ ನಂತರ ರಾಜಸ್ಥಾನದ 32 ವರ್ಷದ ವ್ಯಕ್ತಿಯನ್ನು ಕರ್ನಾಟಕದಲ್ಲಿ ಬಂಧಿಸಲಾಯಿತು.
ಬಾಲಿವುಡ್ ನಟ ಸಲ್ಮಾನ್ ಖಾನ್ ಹಲವು ದಿನಗಳಿಂದ ಗ್ಯಾಂಗ್ಸ್ಟರ್ಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸಲ್ಮಾನ್ ಹೆಸರಿನಲ್ಲಿ ಒಂದರ ಹಿಂದೆ ಒಂದರಂತೆ ಬೆದರಿಕೆಗಳು ಬರುತ್ತಿವೆ. ನಟನ ಭದ್ರತೆಯನ್ನು ಹೆಚ್ಚಿಸಲಾಗಿದೆ ಮತ್ತು ಪೊಲೀಸರು ಪ್ರಕರಣವನ್ನು ತ್ವರಿತವಾಗಿ ತನಿಖೆ ನಡೆಸುತ್ತಿದ್ದಾರೆ. ನವೆಂಬರ್ 5, ಮಂಗಳವಾರ ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಶಾರುಖ್ ಖಾನ್ಗೆ ಬೆದರಿಕೆಯ ದೂರು ದಾಖಲಾಗಿತ್ತು. ಇದೀಗ ಆತನನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ