ಬೆಂಗಳೂರು: ಮದ್ಯ ಮಾರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಗೃಹ ಕಚೇರಿ ಕೃಷ್ಣದಲ್ಲಿ ನಡೆಸಿದ ಸಭೆ ಯಶಸ್ವಿಯಾಗಿದ್ದು ಮುಷ್ಕರ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಭೆಯ ಹೈಲೈಟ್ಸ್…
*ಮದ್ಯ ಮಾರಾಟಗಾರರ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಲಾಗುವುದು.
*ಮದ್ಯಮಾರಾಟಗಾರರಿಗೆ ವ್ಯಾಪಾರ ಹೆಚ್ಚಾಗಿ ಸರ್ಕಾರಕ್ಕೆ ಆದಾಯ ತರುವಂತೆ enforcement ಮಾಡಲಾಗುವುದು.
*ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ಅಬಕಾರಿ ಆಯುಕ್ತರಿಗೆ ಸೂಚನೆ ನೀಡಲಾಗುವುದು.
*ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಪಾಲರಿಗೆ ನಾವು ದೂರು ಕೊಟ್ಟಿಲ್ಲ. ಈ ಬಗ್ಗೆ ಸುಳ್ಳು ಹಬ್ಬಿಸಿದ್ದಾರೆ. ದೂರು ಕೊಟ್ಟವರಿಗೂ ನಮಗೂ ಸಂಬಂಧವೇ ಇಲ್ಲ. ಈ ಬಗ್ಗೆ ಬೇಕಿದ್ದರೆ ಪರಿಶೀಲನೆ ನಡೆಸಿ, ತನಿಖೆ ನಡೆಸಿ ಎಂದು ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಒಕ್ಕೋರಲಿನಿಂದ ಸ್ಪಷ್ಟಪಡಿಸಿದರು.
*ಅಬಕಾರಿ ಇಲಾಖೆ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿ ಜಾರಿಗೆ ತರುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಿಎಂ ತಿಳಿಸಿದರು.
ಮದ್ಯ ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ ಸಿಎಂ
ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ: ಸಿಎಂ ಎಚ್ಚರಿಕೆ.