ಬೆಂಗಳೂರು ಗ್ರಾಮಾಂತರ : ನಾಮಕರಣಕ್ಕೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿಯಾಗಿರುವ ಘಟನೆ ದೊಡ್ಡಬಳ್ಳಾಪುರದ ಮೇಷ್ಟ್ರು ಮನೆ ಗೇಟ್ ಬಳಿ ನಡೆದಿದೆ.
ನಾಮಕರಣಕೆಂದು ಮಿನಿಬಸ್ ನಲ್ಲಿ25 ಜನ ತುಮಕೂರಿನ ಶಿರಾದಿಂದ ಯಲಹಂಕಕ್ಕೆ ಪ್ರಯಾಣಕ್ಕೆ ತೆರಳುತ್ತಿದ್ದರು. ಈ ವೇಳೆ ಬಸ್ ಪಲ್ಟಿಯಾಗಿದ್ದು, ಅದೃಷ್ಟವಶಾತ್ 25 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾಋೆ. ಮೂವರಿಗೆ ಕೈ ಕಾಲು, ಬೆನ್ನು, ತಲೆ ಭಾಗಕ್ಕೆ ಗಾಯವಾಗಿದ್ದು, ಗಾಯಾಳನ್ನು ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನೊಂದೆಡೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೇರೂರು ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದ್ದು, ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಕುಕ್ಕೆ ಸುಬ್ರಮಣ್ಯ ದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ನಲ್ಲಿ ಒಟ್ಟು 24 ಜನ ಪ್ರಯಾಣಿಕರು ಇದ್ದರು, ಅವರಲ್ಲಿ ಐವರಿಗೆ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.