ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ವಸತಿ ಗೃಹದಲ್ಲಿದ್ದ ಜೋಡಿಯ ಮೇಲೆ ದುಷ್ಕರ್ಮಿಗಳು ನೈತಿಕ ಪೊಲೀಸ್ ಗಿರಿ ನಡೆಸಿರುವುದು ಖಂಡನೀಯ. ಅಮಾಯಕರ ಮೇಲೆ ನೈತಿಕ ಪೋಲಿಸ್ ಗಿರಿ ನಡೆಸಿರುವ ಎಲ್ಲ ಗೂಂಡಾಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಮಾಜಿ ಸಿಎಂ ಬೊಮ್ಮಾಯಿ ಅವರು ಆಗ್ರಹಿಸಿದ್ದಾರೆ.
https://x.com/BSBommai/status/1745361901419430255?t=PmeIGBw5-xv739jmZK4nrg&s=08
ಯುವತಿಯ ಮೇಲೆ ಹಲ್ಲೆ ನಡೆಸಿ, ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ತೆರಳಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪವೂ ಕೇಳಿ ಬರುತ್ತಿದೆ. ಈ ರೀತಿ ಮಹಿಳೆಯ ಮೇಲೆ ದೌರ್ಜನ್ಯ ನಡೆಸಿ ಪುಂಡರು ರಾಜಾರೋಷವಾಗಿ ನೈತಿಕ ಪೊಲೀಸ್ ಗಿರಿ ಮಾಡಲು ಬಿಟ್ಟಿರುವುದನ್ನು ನೋಡಿದರೆ, ರಾಜ್ಯದಲ್ಲಿ ಸರ್ಕಾರ ಜೀವಂತ ಇದೀಯಾ ಇಲ್ಲವೋ ಎನ್ನುವಂತಾಗಿದೆ.
ನೈತಿಕ ಪೊಲಿಸ್ ಗಿರಿ ಬಗ್ಗೆ ಪುಂಖಾನುಪುಂಕವಾಗಿ ಮಾತನಾಡುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂತಹ ಹೀನ ಕೃತ್ಯ ನಡೆದರೂ ಮೌನ ವಹಿಸಿರುವುದೇಕೆ. ದೌರ್ಜನ್ಯ ಮಾಡಿರುವ ಕಿರಾತಕರು ಅಲ್ಪ ಸಂಖ್ಯಾತರು ಅನ್ನುವ ಕಾರಣಕ್ಕೆ ದಿವ್ಯ ಮೌನ ವಹಿಸಿದ್ದಾರಾ ? ಈ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಬೇಕು.