ಬೆಂಗಳೂರು:– ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಮೇಶ್ವರ ಗ್ರಾಮದಲ್ಲಿ ಫೋಟೋಶೂಟ್ ಮಾಡುತ್ತಿದ್ದ ಯುವಕನನ್ನು ನಾಲ್ವರು ಯುವಕರು ಹತ್ಯೆ ಮಾಡಿದ ಘಟನೆ ಜರುಗಿದೆ.
ಸೂರ್ಯ ಕೊಲೆಯಾದ ದುರ್ದೈವಿ.
ದೀಪಾವಳಿ ಹಬ್ಬದ ಪ್ರಯುಕ್ತ ರಾಮೇಶ್ವರ ಗ್ರಾಮದ ಡಾಬಾದ ಸೀನರಿ ಹಾಕಲಾಗಿತ್ತು. ಇದರ ಮುಂದೆ ನಿಂತು ಸೂರ್ಯ ತನ್ನ ಸ್ನೇಹಿತರಿಂದ ಫೋಟೋ ತೆಗೆಸಿಕೊಳ್ಳುತ್ತಿದ್ದನು. ಈ ವೇಳೆ ನಾಲ್ವರು ಅಪರಿಚಿತ ಯುವಕರು ಬಂದು ಸೂರ್ಯನ ಜೊತೆ ಕಿರಿಕ್ ಮಾಡಿದ್ದಾರೆ. ಸೂರ್ಯನ ಬಳಿ ಇದ್ದ ಕ್ಯಾಮರಾ ಕಿತ್ತುಕೊಳ್ಳಲು ಯತ್ನಿಸಿದಾಗ ವಿರೋಧ ವ್ಯಕ್ತಪಡಿಸಿದ್ದಾನೆ. ಹೀಗಾಗಿ ಸೂರ್ಯನನ್ನು ದುಷ್ಕರ್ಮಿಗಳು ಹತ್ಯೆಗೈದು ಸ್ಥಳದಿಂದ ಪರಾರಿಯಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ದೊಡ್ಡಬೆಳವಂಗಲ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.