ರಾಯಚೂರು: ರಾಜ್ಯದಲ್ಲಿ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಬೆಳಕಿಗೆ ಬಂದ ಬಳಿಕ ರಾಜ್ಯದ ಹಲವೆಡೆ ನಿರಂತರವಾಗಿ ಪ್ರಕರಣಗಳು ವರದಿಯಾಗುತ್ತಿವೆ. ಕೆಲ ದಿನಗಳ ಹಿಂದೆ ಕಲಬುರಗಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಾಣಂತಿಯರು ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಬೆಳಗಾವಿ ಜಿಲ್ಲೆಯಲ್ಲಿಯೇ ಬಾಣಂತಿಯೊಬ್ಬಳು ಮೃತಪಟ್ಟ ಬಗ್ಗೆ ವರದಿಯಾಗಿತ್ತು. ಇದೀಗ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾಳೆ.
ಮಲೇಷ್ಯಾ ಮೂಲದ ಪೌಷ್ಟಿಕಯುಕ್ತ ರಂಬುಟಾನ್ ಹಣ್ಣು ಕರ್ನಾಟಕದಲ್ಲಿಯೂ ಬೆಳೆಯಬಹುದು..! ಹೇಗೆ ಗೊತ್ತಾ..?
ಹೌದು ಹೊಸ ವರ್ಷದ ಮೊದಲ ದಿನವೇ ಬಾಣಂತಿ ಮತ್ತು ನವಜಾತ ಶಿಶು ಸಾವನ್ನಪ್ಪಿರುವ ಘಟನೆ ರಾಯಚೂರು ನಗರದ ರಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಶಿವಲಿಂಗಮ್ಮ(21) ಮೃತಪಟ್ಟ ಬಾಣಂತಿಯಾಗಿದ್ದು, ಡಿಸೆಂಬರ್ 25ರಂದು ಶಿವಲಿಂಗಮ್ಮಗೆ ಹೆರಿಗೆ ಆಗಿತ್ತು.
ಐದು ದಿನಗಳ ಕಾಲ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿವಲಿಂಗಮ್ಮ, ಇಂದು ಬೆಳಿಗ್ಗೆ 5 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೇ ಬಾಣಂತಿ ಮತ್ತು ಮಗು ಸಾವನ್ನಪ್ಪಿದೆ ಎನ್ನಲಾಗಿದೆ. ಇನ್ನು ಮಗುವಿಗೆ ಸೋಂಕು ತಗುಲಿ ಸಾವನ್ನಪ್ಪಿದೆ ಅಂತ ವೈದ್ಯರು ಸ್ಪಷ್ಟನೆ ನೀಡಿದ್ದಾರೆ. ಇತ್ತ ಕುಟುಂಬಸ್ಥರು ವೈದ್ಯರು ಸರಿಯಾಗಿ ಚಿಕಿತ್ಸೆ ನೀಡಿಲ್ಲ, ಬಾಣಂತಿ ಸಾವಿಗೆ ವೈದ್ಯರ ನಿರ್ಲಕ್ಷ್ಯವೆಂದು ಆರೋಪ ಮಾಡಿದ್ದಾರೆ.