ಹುಬ್ಬಳ್ಳಿ : ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಮತಾಂಧ ಶಕ್ತಿಗಳು ದೊಡ್ಡ ಮಟ್ಟದಲ್ಲಿ ತಲೆ ಎತ್ತುತ್ತಿವೆ. ಮೈಸೂರಿನ ಘಟನೆ ಪೂರ್ವ ತಯಾರಿಯಿಂದ ಆಗಿದೆ. ಇದು ಸಂಪೂರ್ಣ ತನಿಖೆಯಾಗಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿ ನಗರದಲ್ಲಿಂದು ಮಾತನಾಡಿದ ಅವರು, ಇದು ಅತ್ಯಂತ ಗಂಭೀರವಾದ ವಿಷಯ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಪಿಎಫ್ ಐ, ಎಸ್ ಡಿಪಿಐ, ಕೇಸ್ ವಾಪಸು ಪಡೆದ್ರು. ಹಳೇ ಹುಬ್ಬಳ್ಳಿ ಕೇಸ್ ವಾಪಸಾತಿಯಿಂದ ಅವರಿಗೆ ದೊಡ್ಡ ಕುಮ್ಮಕ್ಕು ಬಂದಿದೆ. ಇಸ್ಲಾಂ ಮತಾಂಧ ಶಕ್ತಿಗಳು ಕಾಂಗ್ರೆಸ್ ಬೆಂಬಲದಿಂದ ಈ ರೀತಿಯಲ್ಲಿ ವರ್ತನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ನವರಿಗೆ ಮುಸ್ಲಿಂ ಅವರು ಮಾತ್ರ ಬೇಕಾ?.ಈ ಘಟನೆಯನ್ನು ಸಹ ಕಾಂಗ್ರೆಸ್ ಇದನ್ನು ತುಷ್ಟಿಕರಣಕ್ಕೆ ಬಳಸಿಕೊಳ್ಳಲಾಗುತ್ತಿದೆ. ಗೃಹ ಸಚಿವರು ತಮ್ಮ ಐಡಿಯಾಲಜಿ ತಕ್ಕಂತೆ ಮಾತನಾಡನಾಡುತ್ತಾರೆ. ಸಾರ್ವಜನಿಕರ ಆಸ್ತಿ ನಷ್ಟ ಬರಿಸೋರು ಯಾರು? ಅತೀ ಹೆಚ್ಚು ಹಿಂದೂಗಳು ತೆರಿಗೆ ನೀಡುತ್ತಾರೆ. ಗಲಭೆಕೋರರಿಂದ ಆಸ್ತಿ ನಷ್ಟವನ್ನು ಒದ್ದು ವಸೂಲಿ ಮಾಡಬೇಕು. ಸರ್ಕಾರಕ್ಕೆ ತಾಕತ್ತು ಇದ್ದರೆ ಇದನ್ನು ಮಾಡಲಿ ಎಂದು ಆಗ್ರಹಿಸಿದರು.