ಬೆಂಗಳೂರು:- ಹೊಸ ವರ್ಷಾಚರಣೆ ನಿರ್ಬಂಧ ಕೋರಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಕೊರೋನ ಸೋಂಕು ತಡೆಗಟ್ಟಲು ಹೊಸ ವರ್ಷಾಚರಣೆ ನಿರ್ಬಂಧಿಸಬೇಕು ಎಂದು ವಕೀಲ ಎನ್.ಪಿ.ಅಮೃತೇಶ್ ಮನವಿ ಮಾಡಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ರಾಜ್ಯದಲ್ಲಿಯೂ ಕೊರೋನ ಹರಡುವ ಭೀತಿ ಎದುರಾಗಿದೆ. ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ ನೀಡಿದೆ.
ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಕಮರ್ಷಿಯಲ್ ಸ್ಟ್ರೀಟ್ಗಳಲ್ಲಿ ಸಾವಿರಾರು ಜನ ಸೇರುತ್ತಾರೆ. ಈ ಪ್ರದೇಶಗಳಲ್ಲಿ ಹೊಸ ವರ್ಷಾಚರಣೆ ನಿರ್ಬಂಧ ಮನವಿ ಮಾಡಲಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)