ಬೆಂಗಳೂರು: ಅಪರಿಚಿತರು ಬಂದಾಗ ಸಾಕು ನಾಯಿಗಳು ಬೊಗಳುವುದು ಸಾಮಾನ್ಯ. ಅಂತೆಯೇ ನಾಯಿ ಬೊಗಳಿದ್ದಕ್ಕೆ (Dog Barking) ಪಕ್ಕದ ಮನೆಯವನು ಕಿರಿಕ್ ಮಾಡಿದ ಪ್ರಸಂಗವೊಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ನಡೆದಿದೆ.
Lok Sabha Elections 2024: ಪ್ರಧಾನಿ ಮೋದಿ ಕರ್ನಾಟಕ ಭೇಟಿಗೆ ದಿನಾಂಕ ಫಿಕ್ಸ್: ಈ ಕ್ಷೇತ್ರಗಳೇ ಬಿಗ್ ಟಾರ್ಗೆಟ್!
ಈ ಘಟನೆ ಪಟ್ಟೇಗಾರಪಾಳ್ಯದ ಮುನೇಶ್ವರ ನಗರದಲ್ಲಿ ನಡೆದಿದೆ. ಕಿರಿಕ್ ಮಾಡಿ ನಾಯಿ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದಲ್ಲದೇ ಪುಂಡರು, ಮಾಲೀಕನ ಮಗಳನ್ನು ಕೂಡ ಎಳೆದಾಡಿದ್ದಾರೆ.
ನಡೆದಿದ್ದೇನು..?: ದೂರುದಾರೆ ಶಾಲಿನಿಯವರ ಮನೆಯಲ್ಲಿ ನಾಯಿ ಸಾಕುತ್ತಿದ್ದಾರೆ. ಮಾರ್ಚ್ 7 ರಂದು ಪಕ್ಕದ ಮನೆಯ ಶಂಕರ್ ರಾತ್ರಿ 10-30ಕ್ಕೆ ಸ್ನೇಹಿತರ ಜೊತೆ ಬಂದಿದ್ದರು. ಅಪರಿಚಿತರು ಬಂದಿದ್ದಕ್ಕೆ ನಾಯಿ ಬೊಗಳಿದೆ. ಇಷ್ಟಕ್ಕೇ ಶಂಕರ್ ಅಂಡ್ ಗ್ಯಾಂಗ್ ನಾಯಿ ಮೇಲೆ ಅಟ್ಯಾಕ್ ಮಾಡಿದೆ. ನಾಯಿಯ ಮಾಲೀಕರು ಇದ್ಯಾಕಪ್ಪ ಅಂತಾ ಕೇಳೋಕೆ ಬಂದಾಗ ಅವರ ಮೇಲೂ ಹಲ್ಲೆ ನಡೆಸಿದೆ.