ಬೆಂಗಳೂರು: ಈ ಸರ್ಕಾರ ಶಾಸಕರ ಕ್ಷೇತ್ರಗಳಿಗೆ 1 ರೂ.ಕೂಡ ಅನುದಾನ ನೀಡುತ್ತಿಲ್ಲ. ಈ ವಿಚಾರವನ್ನು ಅವರದ್ದೇ ಪಕ್ಷದ ಶಾಸಕರೇ ಬಹಿರಂಗಪಡಿಸಿದ್ದಾರೆ. ಭ್ರಷ್ಟ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುತ್ತೇವೆ ಎಂದು ಅಧಿಕಾರ ಸ್ವೀಕಾರ ಮಾಡಿದ ಬಳಿಕ ಬಿ.ವೈ.ವಿಜಯೇಂದ್ರ ಹೇಳಿದರು.
ರಾಜ್ಯದಲ್ಲಿ ಭೀಕರ ಬರಗಾಲ ಇದ್ದರೂ ಯಾವುದೇ ಕ್ರಮವಿಲ್ಲ. ಬರಪೀಡಿತ ಜಿಲ್ಲೆಗಳಿಗೆ ಈವರೆಗೂ ಯಾವುದೇ ಸಚಿವರು ಭೇಟಿ ನೀಡಿಲ್ಲ ಎಂದು ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಅಧಿಕಾರದ ಅಹಂ, ಗರ್ವದಿಂದ ಸಚಿವರು ಮೆರೆಯುತ್ತಿದ್ದಾರೆ. ಮುಂದೆ ಈ ಸರ್ಕಾರವನ್ನು ಕಿತ್ತೊಗೆಯುವ ಕೆಲಸ ಆಗಬೇಕು ಎಂದರು.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅಧಿಕಾರ ಸ್ವೀಕಾರ ಹಿನ್ನೆಲೆ ಬಿ.ಎಸ್. ಯಡಿಯೂರಪ್ಪ ಹುಟ್ಟೂರು ಬೂಕನಕೆರಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆಯ ಯಡಿಯೂರಪ್ಪ ನಿವಾಸದಲ್ಲಿ ಸಂತಸ ಮನೆ ಮಾಡಿದೆ.ಯಡಿಯೂರಪ್ಪ ಅವರ ಕುಟುಂಬದಲ್ಲಿ ಮಂದಹಾಸ ಮನೆ ಮಾಡಿದೆ.