ನವದೆಹಲಿ: ಆರೋಗ್ಯ ಇಲಾಖೆಯ ಮಾಹಿತಿಯಂತೆ, ದೇಶದ ಕೇಂದ್ರಾಡಳಿತ ಪ್ರದೇಶಗಳೂ ಸೇರಿದಂತೆ 27 ರಾಜ್ಯಗಳಲ್ಲಿ ಒಮಿಕ್ರಾನ್ ಸೋಂಕು ಕಂಡು ಬಂದಿದೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಮಂದಿ ಸೋಂಕಿತರು ಕಂಡುಬಂದಿದ್ದು, ನಂತರ ಸ್ಥಾನದಲ್ಲಿ ದೆಹಲಿ, ಕರ್ನಾಟಕ ಮತ್ತು ರಾಜಸ್ಥಾನ ರಾಜ್ಯಗಳಿವೆ. ಈವರೆಗೆ ದೇಶದಲ್ಲಿ 3,623 ಮಂದಿ ಒಮಿಕ್ರಾನ್ ಸೋಂಕಿತರು ಪತ್ತೆಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. 1407 ಮಂದಿ ಗುಣಮುಖರಾಗಿದ್ದಾರೆ.
