ಬೆಂಗಳೂರು: ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 31 ಕ್ಕೆ ಏರಿಕೆಯಾಗಿದೆ ಎಂದು ಸಚಿವ ಡಾ. ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಇಂದು ಮಾತ್ರವೇ 12 ಹೊಸ ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.
ಅದ್ರಂತೆ, ಬೆಂಗಳೂರಿನಲ್ಲಿ 10 ಪ್ರಕರಣಗಳು, ಮಂಗಳೂರು ಮತ್ತು ಮೈಸೂರಿನಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿದೆ’ ಎಂದು ಟ್ವಿಟ್ಟರ್ ನಲ್ಲಿ ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ. ಇನ್ನೂ ರಾಜ್ಯದಲ್ಲಿ ಸೋಂಕು ಹೆಚ್ಚಳ ಆಗುತ್ತಿರುವ ಹಿನ್ನೆಲೆ, ಹೆಚ್ಚಿನ ನಿಗಾ ವಹಿಸುವಂತೆ ಬಿಬಿಎಂಪಿ & ಜಿಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
