ಬೆಂಗಳೂರು: ಡಿಕೆ ಶಿವಕುಮಾರ್ ಕನಸು ಕನಸಾಗಿಯೇ ಉಳಿಯುವುದು ಮಾತ್ರ ಗ್ಯಾರೆಂಟಿ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ತಮ್ಮ ಅನುಪಸ್ಥಿತಿಯಲ್ಲಿ ಸಂಪುಟ ಸಭೆ ನಡೆಯುತ್ತದೆ. ಬಸ್ ಟಿಕೆಟ್ ದರ ಶೇ 15 ರಷ್ಟು ಹೆಚ್ಚಿಸುವಂತಹ ಪ್ರಮುಖ ನಿರ್ಧಾರ ಆಗುತ್ತದೆ. ಒಬ್ಬ ಉಪಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ಅನುಪಸ್ಥಿತಿಯಲ್ಲಿ ಇಂತಹ ನಿರ್ಧಾರಗಳು ಆಗುತ್ತೆ ಅಂದರೆ ಏನರ್ಥ?
ಬ್ಯಾಟರಿ ತೆಗೆಯಲು ಸಾಧ್ಯವಿಲ್ಲದ ಮೊಬೈಲ್ ಹ್ಯಾಂಗ್- ಸ್ಲೋ ಆಗ್ತಿದ್ಯಾ..? ಹಾಗಿದ್ರೆ ಈ ಟಿಪ್ಸ್ ಪಾಲಿಸಿ
ಕಾಂಗ್ರೆಸ್ ಪಕ್ಷದಲ್ಲಿ ತಾವು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆಯೇ ಅಥವಾ ತಮ್ಮ ಅಬ್ಬರ ಏನಿದ್ದರೂ ಮಾಧ್ಯಮಗಳ ಮುಂದೆ ಮಾತ್ರವೇ? ಹೀಗೆ ಮುಂದುವರೆದರೆ ತಮ್ಮ ಕನಸು ಕನಸಾಗಿಯೇ ಉಳಿಯುವುದು ಮಾತ್ರ ಗ್ಯಾರೆಂಟಿ’ ಎಂದು ಅಶೋಕ್ ವ್ಯಂಗ್ಯವಾಡಿದ್ದಾರೆ.
ನಿನ್ನೆ ರಾತ್ರಿ ನಡೆದ ಸಿದ್ದರಾಮಯ್ಯ ಬಣದ ಡಿನ್ನರ್ ಮೀಟಿಂಗ್ ರಾಜಕೀಯ ವಲಯದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿದೆ. ಎಲ್ಲದಕ್ಕೂ ಮಿಗಿಲಾಗಿ, ಡಿಕೆ ಶಿವಕುಮಾರ್ ವಿದೇಶ ಪ್ರವಾಸದಲ್ಲಿರುವ ಸಂದರ್ಭದಲ್ಲಿ ಈ ಸಭೆ ಆಯೋಜಿಸಿದ್ದು ಸಾಕಷ್ಟು ಕುತೂಹಲಗಳನ್ನು ಸೃಷ್ಟಿಸಿದೆ.