ಬೆಂಗಳೂರು: ನಾಡಿನ ಜನತೆ ಶಿಸ್ತು ಬದ್ಧ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಸಂತಾಪ ಸೂಚಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜಕೀಯದ ಜತೆಗೆ ಕಲೆ, ಸಾಹಿತ್ಯ, ಕ್ರೀಡೆಗಳಲ್ಲೂ ಅತ್ಯಂತ ಆಸಕ್ತರಾಗಿದ್ದ ಎಸ್.ಎಂ.ಕೃಷ್ಣ ಅವರು ಯುವರಾಜಕಾರಣಿಗಳಿಗೆ ಆದರ್ಶಪ್ರಾಯರು.
ರೈತರೇ ಗಮನಿಸಿ.. ಕೇಂದ್ರ ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಿದ್ರೆ ನಿಮಗೆ ಸಿಗಲಿದೆ ತಿಂಗಳಿಗೆ 3 ಸಾವಿರ ರೂ.ಪಿಂಚಣಿ!
ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಅವರು ಸಲ್ಲಿಸಿದ ಸೇವೆಯಿಂದಾಗಿ ಬೆಂಗಳೂರು ಇಂದು ಐಟಿಬಿಟಿ ಸಿಟಿಯಾಗಿ ಬೆಳೆಯಲು ಸಾಧ್ಯವಾಗಿದೆ. ಸಾಮಾಜಿಕ ಕಳಕಳಿ, ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿಯ ದೂರ ದೃಷ್ಟಿ ಹಾಗೂ ಕಟ್ಟುನಿಟ್ಟಿನ ಆಡಳಿತ ಶೈಲಿ ನಮ್ಮಂತವರಿಗೆ ಸದಾ ಪ್ರೇರೇಪಣೆ ನೀಡುವಂತದ್ದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.