ಮೇಘಾಲಯ:- ಮೇಘಾಲಯದ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಜನರು ಹೊಡೆದು ಕೊಂದಿರುವ ಘಟನೆ ಜರುಗಿದೆ.
ನಮ್ಮ ಮೆಟ್ರೋದಲ್ಲಿ ಯುವಕ-ಯುವತಿಯ ರೊಮ್ಯಾನ್ಸ್.. ಪ್ರಯಾಣಿಕರ ಆಕ್ರೋಶ..
ಬಾಲಕಿ ಮನೆಯಲ್ಲಿದ್ದಾಗ ಇಬ್ಬರೂ ಚಾಕುವಿನಿಂದ ಹಲ್ಲೆ ಮಾಡಿ ಅತ್ಯಾಚಾರಕ್ಕೆ ಪ್ರಯತ್ನಿಸಿದರು ಎಂದು ಆರೋಪಿಸಲಾಗಿದೆ. ಬಾಲಕಿ ಕಿರುಚಾಟವನ್ನು ಕೇಳಿ ಅಕ್ಕಪಕ್ಕದ ಮನೆಯವರು ಓಡಿ ಬಂದು ಇಬ್ಬರನ್ನು ಹಿಡಿದಿದ್ದಾರೆ. ಬಳಿಕ ಅಕ್ಕಪಕ್ಕದ ಮನೆಯವರು ಊರಿನ ಎಲ್ಲರಿಗೂ ಮಾಹಿತಿ ನೀಡಿ ಸ್ಥಳಕ್ಕೆ ಕರೆಸಿದ್ದಾರೆ. ಬಳಿಕ ನೂರಕ್ಕೂ ಅಧಿಕ ಮಂದಿ ಸೇರಿ ಇಬ್ಬರನ್ನು ಥಳಿಸಿದ್ದಾರೆ. ಪೊಲೀಸರು ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.
ಇಬ್ಬರಲ್ಲಿ ಒಬ್ಬ ತಿರೋತ್ ಸಿಂಗ್ ಎಂಬಾತ ಸಿವಿಲ್ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಇನ್ನೊಬ್ಬ ಶಿಲ್ಲಾಂಗ್ ಸಿವಿಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಮದುವೆ ನೆಪದಲ್ಲಿ ಆರೋಪಿ ಸಂತ್ರಸ್ತೆಯನ್ನು 6 ತಿಂಗಳಿನಿಂದ ಅತ್ಯಾಚಾರವೆಸಗುತ್ತಿದ್ದ ಎಂದು ಹೇಳಲಾಗುತ್ತಿದೆ. ಈ ಪ್ರಕರಣದಲ್ಲಿ ಯುವಕನನ್ನು ಬಂಧಿಸಲಾಗಿದೆ.