ನವದೆಹಲಿ: ಮೂರನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿಯವರು ಅತ್ಯುತ್ತಮ ಕೆಲಸಗಳನ್ನು ಮಾಡಲಿದ್ದಾರೆ ಎಂದು ಭಾವಿಸಿದ್ದೇನೆ ಅಂತಾ ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. 18ನೇ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಸಂಸತ್ತಿನಲ್ಲಿ ಇಂದು ಮಾತನಾಡಿದ ಅವರು, ನೂತನ ಸಂಸದರಿಗೆ ಅಭಿನಂದನೆ ಸಲ್ಲಿಸಿ ಬಳಿಕ ಮಾತನಾಡಿದ ಮುರ್ಮು ಅವರು ಮೊದಲಿಗೆ ಓಂ ಬಿರ್ಲಾ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಬಳಿಕ ಓಂ ಬಿರ್ಲಾ ಅವರು ಅತ್ಯುತ್ತಮವಾಗಿ ಕೆಲಸ ಮಾಡಲಿದ್ದಾರೆ ಎಂದು ಭಾವಿಸಿದ್ದೇನೆ ಎಂದು ಹೇಳಿದರು.
ಅಪಪ್ರಚಾರಕ್ಕೆ ಚುನಾವಣೆ ಮೂಲಕ ಉತ್ತರ: ಇದೇ ವೇಳೆ ಚುನಾವಣಾ ಆಯೋಗಕ್ಕೂ ಅಭಿನಂದನೆಗಳನ್ನು ಸಲ್ಲಿಸಿದ ಅವರು, ವಿಶ್ವದ ಅತಿದೊಡ್ಡ ಚುನಾವಣೆ, ಜನರು ಉತ್ಸಾಹದಿಂದ ಮತದಾನ ಮಾಡಿದ್ದಾರೆ. ಮಹಿಳೆಯರು ಹೆಚ್ಚು ಮತದಾನ ಮಾಡಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ದಾಖಲೆಯ ಮತದಾನವಾಗಿದೆ. ಕಾಶ್ಮೀರದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿತ್ತು. ಆದರೆ ಈ ಚುನಾವಣೆ ಮೂಲಕ ಉತ್ತರ ನೀಡಲಾಗಿದೆ ಎಂದು ಹೇಳಿದರು.
![Demo](https://ainlivenews.com/wp-content/uploads/2023/12/spoorthi-1.jpg)
ದರ್ಶನ್ ಜೊತೆ ಈ ಸ್ಟಾರ್ ನಟಿಗೂ ಇತ್ತಾ ಸಂಬಂಧ..? ಸ್ಫೊಟಕ ಮಾಹಿತಿ ಬಿಚ್ಚಿಟ್ಟ ಓಂ ಪ್ರಕಾಶ್ ರಾವ್
ಈ ಅವಧಿಯ ಮೊದಲ ಬಜೆಟ್ ಮಂಡಿಸಲಿದೆ. ದೊಡ್ಡ ಆರ್ಥಿಕ, ಸಾಮಾಜಿಕ ಬದಲಾವಣೆಯತ್ತ ಹೆಜ್ಜೆ ಇಡುವ ಬಜೆಟ್ ಇದಾಗಲಿದೆ. ರಾಜ್ಯದ ವಿಕಾಸವೇ ದೇಶದ ವಿಕಾಸ್ ಎನ್ನುವ ಭಾವನೆಯಿಂದ ನಮ್ಮ ಸರ್ಕಾರ ಮುಂದುವರಿಯಲಿದೆ. 12 ರಿಂದ 5 ನೇ ಬಲಿಷ್ಠ ಆರ್ಥಿಕತೆಯಾಗಿ ದೇಶ ಬದಲಾಗಿದೆ. ಕೊರೊನಾ ಮತ್ತು ಯುದ್ಧದ ಪರಿಸ್ಥಿತಿಯಲ್ಲೂ ಭಾರತ ಅಭಿವೃದ್ಧಿ ಸಾಧಿಸಿದೆ. ಸರ್ವಿಸ್ ಸೆಕ್ಟರ್ ಬಲಪಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.
ಪ್ರತಿ ಕ್ಷೇತ್ರದಲ್ಲಿ ಭಾರತ ಲೀಡರ್: ನಮ್ಮ ಸರ್ಕಾರ ಮೂರನೇ ಬಲಿಷ್ಠ ಆರ್ಥಿಕತೆಯಾಗಲು ಹೊರಟಿದೆ. ಪ್ರತಿ ಕ್ಷೇತ್ರದಲ್ಲಿ ಭಾರತ ಲೀಡರ್ ಆಗುತ್ತಿದೆ. ಉದ್ಯೋಗ ಸೃಷ್ಟಿಯಾಗುತ್ತಿವೆ. ಕೃಷಿ ಆಧಾರಿತ ಉದ್ಯಮ ವಿಸ್ತರಣೆ ಮಾಡಲಾಗುತ್ತಿದೆ. ರೈತರಿಗಾಗಿ ಸರ್ಕಾರಿ ಸಂಸ್ಥೆಗಳ ನೆಟ್ವರ್ಕ್ ಮಾಡುತ್ತಿದೆ. ಸಹಕಾರಿ ವಲಯದಲ್ಲಿ ದೊಡ್ಡ ಬದಲಾವಣೆ ಮಾಡುತ್ತಿದೆ. ಸಣ್ಣ ಖರ್ಚು ನಿಭಾಯಿಸಲು ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮೂಲಕ ರೈತರಿಗೆ ಸಹಾಯ ಮಾಡಲಾಗುತ್ತಿದೆ. ಎಂಎಸ್ಪಿಯಲ್ಲಿ ದಾಖಲೆಯ ಸಾಧನೆ ಮಾಡಿದೆ. ವರ್ತಮಾನ ಅಗತ್ಯ ಆಧರಿಸಿ ಕೃಷಿ ವಲಯದಲ್ಲಿ ಬದಲಾವಣೆ ಮಾಡುತ್ತಿದೆ ಎಂದು ತಿಳಿಸಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)