ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಇಂದೂ ಕೂಡ ಭರ್ಜರಿ ಏರಿಕೆ ಕಂಡಿದೆ.
ಮಗನ ಹೆಂಡತಿ ಮೇಲಿತ್ತು ಅತ್ತೆಗೆ ಡೌಟ್ – ಹೀಗ್ಯಾಕೆ ಅಂತ DNA ಟೆಸ್ಟ್ ಮಾಡಿಸಿದ ಸೊಸೆಗೆ ಕಾದಿತ್ತು ಶಾಕ್, ಅತ್ತೆ ಲಾಕ್!
ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 35 ರೂನಷ್ಟು ಹೆಚ್ಚಾಗಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆ 400 ರೂನಷ್ಟು ಹೆಚ್ಚಾಗಿದೆ. ಅದೂ ಒಂದು ಗ್ರಾಮ್ ಚಿನ್ನಕ್ಕೆ. ಇನ್ನು, ಬೆಳ್ಳಿ ಬೆಲೆ ಇಂದು ಗ್ರಾಮ್ಗೆ ಒಂದು ರೂ ಹೆಚ್ಚಾಗಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ ಸುಮಾರು 7 ರೂನಷ್ಟು ಹೆಚ್ಚಾಗಿದೆ. ಈ ಏರಿಕೆ ಹಂತ ಎಲ್ಲಿಯವರೆಗೆ ಎಂಬುದು ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಸದ್ಯದಲ್ಲೇ ಅಮೆರಿಕದ ಆರ್ಥಿಕ ಪರಿಸ್ಥಿತಿಯ ವರದಿ ಬರಲಿದ್ದು, ಅದಾದ ಬಳಿಕ ಚಿನ್ನದ ಬೆಲೆಯಲ್ಲಿ ವ್ಯತ್ಯಯವಾಗಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,110 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,550 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,400 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 11ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,100 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,110 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 855 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,100 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,110 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 840 ರೂ