ಹೆಚ್ಚಿನ ಹೂಡಿಕೆದಾರರು ಡಾಲರ್ ಬಿಟ್ಟು ಚಿನ್ನ ಹಾಗೂ ಷೇರುಗಳತ್ತ ಮುಗಿಬೀಳುತ್ತಿದ್ದಾರೆ. ಇದು ಚಿನ್ನಕ್ಕೆ ಬೇಡಿಕೆ ಹೆಚ್ಚಿಸಿದೆ. ಮೇಲಾಗಿ ಭಾರತದಲ್ಲಿ ಈಗ ಮದುವೆ ಸೀಸನ್ ಕೂಡ ಹೌದು. ಇದು ಹೆಚ್ಚಿನ ಬೇಡಿಕೆ ಸೃಷ್ಟಿಸುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,700 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,850 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,950 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,800 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 2ಕ್ಕೆ):
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 795 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 780 ರೂ