ಚಿನ್ನದ ಬೆಲೆ ಸ್ವಲ್ಪ ಇಳಿಮುಖವಾಗಿದ್ದರೆ, ಬೆಳ್ಳಿ ಬೆಲೆಯಲ್ಲಿ ಏರಿಕೆ ಆಗಿದೆ
ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 1 ರೂ ಮಾತ್ರವೇ ತಗ್ಗಿದೆ. ಅಂತಾರಾಷ್ಟ್ರೀಯವಾಗಿ ಬಹುತೇಕ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆ ಭಾರತದಲ್ಲಿ ಗ್ರಾಮ್ಗೆ 50 ಪೈಸೆ ಏರಿದೆ. ಬೆಂಗಳೂರಿನಲ್ಲಿ 10 ಪೈಸೆ ಏರಿಕೆ ಆಗಿದೆ. ಅಮೆರಿಕದಲ್ಲಿ ಬಡ್ಡಿದರ ಪರಿಷ್ಕರಣೆ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡುವವರೆಗೂ ಇದೇ ಸ್ಥಿತಿ ಮುಂದುವರಿಯಬಹುದು ಎಂಬ ಲೆಕ್ಕಾಚಾರ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 60,740 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 66,260 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,610 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 60,740 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,500 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 13ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,740 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,260 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 761 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,740 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,260 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ