ಬೆಂಗಳೂರು:- ನಂದಿನಿ ಹಾಲಿನ ದರ ಏರಿಕೆ ಆಗುವುದರ ಕುರಿತು KMF ಅಧ್ಯಕ್ಷ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಸದ್ಯಕ್ಕೆ ಹಾಲಿನ ದರ ಏರಿಕೆ ಬಗ್ಗೆ ಮಾಹಿತಿ ಇಲ್ಲ. ಆದರೆ ನಂದಿನಿ ಹಾಲಿನ ದರ ಏರಿಕೆಗೆ ರಾಜ್ಯದ ರೈತರು ಬೇಡಿಕೆ ಇಟ್ಟಿದ್ದಾರೆ. ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರ ವರ್ಗಾವಣೆ ಆಡಳಿತಾತ್ಮಕ ತೀರ್ಮಾನ ಅಷ್ಟೇ ಎಂದು ತಿಳಿಸಿದರು.
ಯತ್ನಾಳ್ ಹೊರಗಿನವರಲ್ಲ, ನಮ್ಮವರೇ ಎಂದ BSY: ಫುಲ್ ಸೈಲೆಂಟ್ ಆದ ಬಿಜೆಪಿ ಶಾಸಕ!
ನವೆಂಬರ್ 21ರಂದು ದೆಹಲಿಯಲ್ಲಿ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಾಲನೆ ನೀಡಲಾಗಿತ್ತು. ಅಲ್ಲಿ, ನಿತ್ಯ 5 ರಿಂದ 6 ಸಾವಿರ ಲೀಟರ್ ನಂದಿನಿ ಹಾಲು ಮಾರಾಟವಾಗುತ್ತಿದೆ. ದೆಹಲಿಯಲ್ಲಿ ನಂದಿನಿ ಹಾಲು ಮಾರಾಟ ಮಾಡುವುದು ನಮ್ಮ ಕನಸು ಇತ್ತು. ಮುಂದಿನ ತಿಂಗಳ ವೇಳೆಗೆ 1 ಲಕ್ಷ ಲೀಟರ್ ಹಾಲು ಮಾರಾಟ ಮಾಡುವ ನಿರೀಕ್ಷೆ ಇದೆ ಎಂದರು.
ಬೇರೆ ಬ್ರ್ಯಾಂಡ್ ಉತ್ಪನ್ನಗಳ ಬಗ್ಗೆ ಮಾತನಾಡುವುದಿಲ್ಲ. ನಮಗೆ ಗ್ರಾಹಕರ ಬೇಡಿಕೆ ಇದೆ, ಅದಕ್ಕೆ ತಕ್ಕಂತೆ ಪೂರೈಕೆ ಮಾಡುತ್ತೇವೆ. ಬ್ಯುಸಿನೆಸ್ನಲ್ಲಿ ಸ್ಪರ್ಧೆ ಇರುತ್ತದೆ. ಅವೆಲ್ಲವನ್ನೂ ಎದುರಿಸಿ ಯಶಸ್ವಿ ಆಗುತ್ತೇವೆ. ಡಿಸೆಂಬರ್ 9ರಂದು ನಾನು, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ದೆಹಲಿಗೆ ಹೋಗುತ್ತೇವೆ ಎಂದು ತಿಳಿಸಿದ್ದಾರೆ.
ಅಮುಲ್ ಮತ್ತು ನಂದಿನಿ ವಿಲೀನ ಆಗಲಿದೆ ಎಂಬ ವದಂತಿ ವಿಚಾರವಾಗಿ ಮಾತನಾಡಿದ ಅವರು, ಆ ರೀತಿಯ ವಿಲೀನ ಮಾಡಲು ಸಾಧ್ಯವೇ ಇಲ್ಲ. ಈ ಹಿಂದೆ ಕೇಂದ್ರ ಸಚಿವ ಅಮಿತ್ ಶಾ ಅವರು ಚುನಾವಣೆ ಸಂದರ್ಭದಲ್ಲಿ ಹೇಳಿದ್ದ ಯಾವುದೋ ಒಂದು ಮಾತಿನ ಹಿನ್ನಲೆಯಲ್ಲಿ ವದಂತಿ ಸೃಷ್ಟಿ ಆಗಿತ್ತು. ಇದೆಲ್ಲವೂ ಒಂದು ವದಂತಿ ಅಷ್ಟೇ. ಆ ರೀತಿಯ ವಿಲೀನ ಮಾಡಲು ಸಾಧ್ಯವೇ ಇಲ್ಲ ಎಂದು ಹೇಳಿದರು.