ತುಮಕೂರು:-ಜಿಲ್ಲೆಯ ಕುಣಿಗಲ್ ತಾಲೂಕಿನ ಕಗ್ಗೆರೆ ಗ್ರಾಮದ ಶ್ರೀ ದಂಡಿನ ಮಾರಮ್ಮ ದೇವಿ ಜಾತ್ರಾ ಪ್ರಯುಕ್ತ ನಡೆದ ಬೆಂಕಿಕೊಂಡ ಹಾಯುವ ಕಾರ್ಯಕ್ರಮದಲ್ಲಿ ಬೆಂಕಿಕೊಂಡದಲ್ಲಿ ಬಿದ್ದ ಅರ್ಚಕ ಮತ್ತು ಮಗ ಸಾವನ್ನಪ್ಪಿರುವ ಘಟನೆ ಜರುಗಿದೆ.
ಅರ್ಚಕ ವೆಂಕಟಪ್ಪ ಹಾಗೂ ಮಗ ಕೃಷ್ಣ ಮೂರ್ತಿಗೆ ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ.
ದೇವರನ್ನ ಹೊತ್ತು ಸಾಗುವಾಗ ಬೆಂಕಿಕೊಂಡದಲ್ಲಿ ಕಾಲು ಜಾರಿ ಅರ್ಚಕ ಹಾಗೂ ಮಗ ಬಿದ್ದು ಗಾಯಗೊಂಡಿದ್ದರು. ಕೂಡಲೇ ಸ್ಥಳೀಯರು ಇಬ್ಬರನ್ನೂ ರಕ್ಷಣೆ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದರು. ಆ ಬಳಿಕ ತೀವ್ರ ಸುಟ್ಟಗಾಯಗಳಾದ ಹಿನ್ನೆಲೆ ಬೆಳ್ಳೂರು ಕ್ರಾಸ್ ಆದಿಚುಂಚನಗಿರಿ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅರ್ಚಕ ಹಾಗೂ ಅವರ ಪುತ್ರ ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.