ಬೆಳಗಾವಿ : ರೇಷ್ಮೆ ಇಲಾಖೆಯನ್ನು ಕೃಷಿ ಇಲಾಖೆಯೊಳಗೆ ವಿಲೀನ ಮಾಡುವುದಕ್ಕೂ, ಗ್ಯಾರಂಟಿ ಯೋಜನೆಗೂ ಯಾವುದೇ ಸಂಬಂಧವಿಲ್ಲ. ರೇಷ್ಮೆ ಇಲಾಖೆಯನ್ನು ಕೃಷಿ ಇಲಾಖೆಯೊಳಗೆ ವಿಲೀನ ಮಾಡುವ ಪ್ರಕ್ರಿಯೆ 10 ವರ್ಷಗಳ ಹಿಂದಯೇ ನಡೆದಿದೆ ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಅನುದಾನ ಕೊರತೆಯಾಗಿದ್ದಕ್ಕೆ ಕೃಷಿ ಇಲಾಖೆಯಲ್ಲಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳನ್ನು ವಿಲೀನಗೊಳಿಸಲು ಸರ್ಕಾರ ಮುಂದಾಗಿದೆಯೇ?’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,
Most Visited Websites: ಭಾರತೀಯರು ಅತಿ ಹೆಚ್ಚು ಭೇಟಿ ನೀಡಿದ ವೆಬ್ ಸೈಟ್ಗಳು ಯಾವುದು ಗೊತ್ತಾ?
ಕೆಲವು ಇಲಾಖೆಗಳು ಪ್ರತ್ಯೇಕವಾಗಿ ಕಾರ್ಯನಿರ್ವಹಿಸುವ ಅವಶ್ಯಕತೆ ಇಲ್ಲ. ಹಾಗಾಗಿ ಈ ಇಲಾಖೆಗಳನ್ನು ವಿಲೀನಗೊಳಿಸುವ ಬಗ್ಗೆ 10 ವರ್ಷಗಳ ಹಿಂದೆಯೇ ವರದಿ ಕೊಟ್ಟಿದ್ದಾರೆ. ಈ ರೀತಿ ಹಿಂದಿನ ಸರ್ಕಾರಗಳಲ್ಲೂ ವಿಲೀನ ಪ್ರಕ್ರಿಯೆ ನಡೆದಿವೆ. ಗ್ಯಾರಂಟಿ ಯೋಜನೆಗಳಿಗೂ ಮತ್ತು ಇದಕ್ಕೂ ಯಾವುದೇ ಸಂಬಂಧವಿಲ್ಲ’ ಎಂದು ಸ್ಪಷ್ಟಪಡಿಸಿದರು. ಕಾಂತರಾಜ್ ಆಯೋಗದ ವರದಿ ಜಾರಿಯಾದರೆ ಕಾಂಗ್ರೆಸ್ ಸರ್ಕಾರಕ್ಕೆ ತೊಂದರೆಯಾಗುತ್ತದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆಯೋಗದವರು ನಮಗೆ ಇನ್ನೂ ವರದಿಯನ್ನೇ ಕೊಟ್ಟಿಲ್ಲ. ವರದಿ ನೀಡಿದ ನಂತರ, ಅದರ ಬಗ್ಗೆ ಚರ್ಚೆಯಾಗಬೇಕು. ಅದಕ್ಕೆ ಸುದೀರ್ಘ ಪ್ರಕ್ರಿಯೆ ಬಾಕಿ ಇದೆ ಎಂದು ಹೇಳಿದರು.