ಬೆಳಗಾವಿ:- ಹಿಂದೂ, ಮುಸ್ಲಿಮರು ಒಂದಾಗಬಾರದು ಎಂಬುದೇ ಕಾಂಗ್ರೆಸ್ ಉದ್ದೇಶ ಎಂದು ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಬಾರದೆಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ವ್ಯಕ್ತಿಯೇ ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದಿಸಿದ್ದಾರೆ. ಈ ಭಾಗದಲ್ಲಿ ಸರ್ವಧರ್ಮೀಯರು ಒಂದಾಗಿ ಬದುಕುತ್ತೇವೆ ಎಂದಿದ್ದಾರೆ. ನಾವೆಲ್ಲರೂ ಒಂದಾಗಿರಬೇಕೆಂಬ ಬಯಕೆ ಮುಸ್ಲಿಮರಲ್ಲಿದೆ.
ಆದರೆ, ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಹಿಂದೂ, ಮುಸ್ಲಿಮರು ಒಂದಾಗಬಾರದು ಎಂಬುದು ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಉದ್ದೇಶವಾಗಿದೆ’ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಆರೋಪಿಸಿದರು.
ತಾಲ್ಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತ್ರಿವಳಿ ತಲಾಖ್ ರದ್ದುಪಡಿಸಿರುವುದನ್ನು ಮುಸ್ಲಿಮರೇ ಒಪ್ಪಿದ್ದಾರೆ. ಆದರೆ, ಕಾಂಗ್ರೆಸ್ನವರು ಒಪ್ಪಲು ತಯಾರಿಲ್ಲ. ಹಿಂದೂ, ಮುಸ್ಲಿಮರು ದೂರವಾಗಬೇಕೆಂದು ಅವರು ಬಯಸುತ್ತಿದ್ದಾರೆ. ಆದರೆ, ಮುಂದೊಂದು ದಿನ ಎಲ್ಲರೂ ಒಂದಾಗುತ್ತಾರೆ ಎನ್ನುವ ವಿಶ್ವಾಸ ತಮಗಿದೆ’ ಎಂದರು.
ಸಿದ್ದರಾಮಯ್ಯ ಈ ಹಿಂದೆ ಪರಿಶಿಷ್ಟ, ಹಿಂದುಳಿದ ಸಮುದಾಯದವರು ಮತ್ತು ಅಲ್ಪಸಂಖ್ಯಾತರ ಪರವಾಗಿ ಧ್ವನಿ ಎತ್ತಿದ್ದರು. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢ ವಿಧಾನಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಧೂಳೀಪಟವಾಗಿದ್ದು, ಪರಿಶಿಷ್ಟರು ಮತ್ತು ಹಿಂದುಳಿದ ಸಮುದಾಯದವರು ಆ ಪಕ್ಷ ಕೈಬಿಟ್ಟಿದ್ದಾರೆ. ಹಾಗಾಗಿ ಅಲ್ಪಸಂಖ್ಯಾತರ ಮತಗಳ ಓಲೈಕೆಗಾಗಿ ಸಿದ್ದರಾಮಯ್ಯ ತುಷ್ಟೀಕರಣ ರಾಜಕೀಯ ಮಾಡುತ್ತಿದ್ದಾರೆ’ ಎಂದು ಆಪಾದಿಸಿದರು.