ಮೈಸೂರು: ಖಂಡಿತ ನಾನು ನ್ಯಾಷನಲ್ ಲೀಡರ್ ಅಲ್ಲ, ಬಡ ಕುಟುಂಬದಿಂದ ಬಂದವನು ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಖಂಡಿತ ನಾನು ನ್ಯಾಷನಲ್ ಲೀಡರ್ ಅಲ್ಲ, ಬಡ ಕುಟುಂಬದಿಂದ ಬಂದವನು. ಸಾಮಾನ್ಯ ಕುಟುಂಬದಿಂದ ಬಂದು ಬರವಣಿಗೆ ಮೂಲಕ ಮುಂದೆ ಬಂದೆ.
Bigg News: ತಡರಾತ್ರಿ ಪಾರ್ಟಿ ಮಾಡಿದ ಆರೋಪ : ಪೊಲೀಸ್ ಠಾಣೆಗೆ ಹಾಜರಾದ ನಟರು: Video
ಅಪ್ಪ ಸಿಎಂ ಆಗಿದ್ರೆ ತನ್ನ ಲ್ಯಾಬ್ ಗೆ ಗುತ್ತಿಗೆ ಪಡೆಯೋರು ನ್ಯಾಷನಲ್ ಲೀಡರ್, ಅಪ್ಪನ ವರುಣ ಬಿಡಿಸಿ ಬಾದಾಮಿ ಕ್ಷೇತ್ರಕ್ಕೆ ಓಡಿಸುವವರು ನ್ಯಾಷನಲ್ ಲೀಡರ್, ತಾನು ಹೇಳಿದ ವರ್ಗಾವಣೆ ಲಿಸ್ಟ್ ಗೆ ಸಹಿ ಮಾಡಿ ಅನ್ನೋದು ನ್ಯಾಷನಲ್ ಲೀಡರ್, ಮೈಸೂರು ಭಾಗದ ನಿಜವಾದ ನ್ಯಾಷನಲ್ ಲೀಡರ್ ಯತೀಂದ್ರ ಸಿದ್ದರಾಮಯ್ಯ ಎಂದು ಯತೀಂದ್ರ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.