ಬೆಂಗಳೂರು:– ಕರ್ನಾಟಕದಲ್ಲಿ ಬಿಜೆಪಿ ಸೋಲಿಗೆ ಕಾರಣ ಏನೆಂಬುವುದನ್ನು ಈಶ್ವರಪ್ಪ ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪ, ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ನೋಡಿದ ಮೇಲೆ ನಮ್ಮ ದೇಶಕ್ಕೆ ಭವಿಷ್ಯ ಇದೆ ಅನ್ನಿಸಿದೆ. ಆದ್ರೆ ಕರ್ನಾಟಕದ ಮತದಾರರ ವಿಚಾರದಲ್ಲಿ ನಾವು ಮಾಡಿಕೊಂಡ ಮುಟ್ಟಾಳತನದಿಂದ ಅಧಿಕಾರ ಕಳೆದುಕೊಳ್ಳಬೇಕಾಯಿತು. ರಾಜ್ಯದಲ್ಲಿಯೂ ಬಿಜೆಪಿ ಒಟ್ಟಾಗಿ ಹೋಗಿದ್ದರೆ ಅಧಿಕಾರ ಕಳೆದುಕೊಳ್ಳುತ್ತಿರಲಿಲ್ಲ ಎಂದು ಅವಲೋಕನ ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಒಟ್ಟಾಗಿ ಹೋಗದೇ ಇದ್ದದ್ದು, ನಮ್ಮ ನೇತೃತ್ದದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ವಿಫಲರಾದೆವು. ಈ ನಡುವೆ ಕಾಂಗ್ರೆಸ್ ಬಡವರಿಗೆ ಕೊಟ್ಟ ಗ್ಯಾರಂಟಿಗಳನ್ನ ಅರ್ಥಮಾಡಿಕೊಳ್ಳುವಲ್ಲಿ ವಿಫಲರಾದೆವು. ಇದೆಲ್ಲವೂ ಬಿಜೆಪಿ ಸೋಲಿಗೆ ಕಾರವಾಯಿತು ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಂತೆ ಛತ್ತೀಸ್ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣದಲ್ಲೂ ಕಾಂಗ್ರೆಸ್ ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬರಲು ಯೋಚಿಸುತ್ತಿತ್ತು. ಆದರೆ ಅದು ವಿಫಲವಾಗಿದೆ. ಬಿಜೆಪಿ ಇಂದೇ ಪಾಠ ಕಲಿಯಬೇಕು. ಮುಂಬರುವ ಚುನಾವಣೆಯಲ್ಲಿ ಗೆಲ್ಲಲು ಎಲ್ಲರೂ ಒಟ್ಟಾಗಿ ಹೋಗಬೇಕಾಗಿದೆ. ಕಾರ್ಯಕರ್ತರುನಮ್ಮ ತಪ್ಪುಗಳಿಮದ ನೊಂದಿದ್ದಾರೆ ಅವರನ್ನು ವಿಶ್ವಾಸಕ್ಕೆ ತೆಗೆದುಕೊಮಡು ಹೋಗಬೇಕಾಗಿದೆ ಎಂದು ಅವರು ಹೇಳಿದರು