ಬಳ್ಳಾರಿ: ಬಳ್ಳಾರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯ ಸಾವಿಗೆ ಕಾರಣವೇನು ಎಂಬುದು ಪತ್ತೆಯಾಗಿದೆ. ಸಿಸೇರಿಯನ್ ವೇಳೆ ನೀಡಿದ್ದ ಐವಿ ಗ್ಲುಕೋಸ್ ನಿಂದಲೇ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ತನಿಖಾ ಸಂಸ್ಥೆ ವರದಿ ತಿಳಿಸಿದೆ. ಐವಿ ಕಳಪೆ ಗುಣಮಟ್ಟದಿಂದ ಕೂಡಿದ್ದು, ವೈದ್ಯರು ಸಿಸೇರಿಯನ್ ವೇಳೆ “IV ಗ್ಲುಕೋಸ್” ನೀಡಿದ್ದರಿಂದ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ತನಿಖಾ ತಂಡ ವರದಿಯಲ್ಲಿ ಉಲ್ಲೇಖಿಸಿದೆ. ಹೀಗಾಗಿ, ಐವಿ ಗ್ಲುಕೋಸ್ ಬಳಸದಂತೆ ಆರೋಗ್ಯ ಇಲಾಖೆ ಸರ್ಕಾರಿ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ.
ಸಚಿವ ಸಂಪುಟ ವಿಸ್ತರಣೆ ಸಿಎಂ, ಹೈಕಮಾಂಡ್ ಗೆ ಬಿಟ್ಟದ್ದು : ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ
ಘಟನೆಯ ವಿವರ
ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಣಿಯರಿಗೆ ಸಿಸೇರಿಯನ್ ಮಾಡಲಾಗಿತ್ತು. ಕಳೆದ ನ.09 ರಂದು ಹೆರಿಗೆ ಬಳಿಕ 07 ಜನ ಬಾಣಂತಿಯರ ಆರೋಗ್ಯದಲ್ಲಿ ಏರುಪೇರು ಉಂಟಾಗಿ, 15 ದಿನಗಳಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದರು. ಇದೇ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿದೆ. ಸರ್ಕಾರದ ವಿರುದ್ಧ ವಿಪಕ್ಷಗಳು ಹರಿಹಾಯ್ದಿದ್ದವು. ಬಾಣಂತಿಯರ ಸಾವಿನ ಕಾರಣ ಪತ್ತೆಗೆ ಸರ್ಕಾರ ತಜ್ಞರ ಸಮಿತಿ ರಚಿಸಿತ್ತು. ಡಾ. ಸವಿತಾ, ಡಾ. ಭಾಸ್ಕರ್ ಮತ್ತು ಡಾ. ಹರ್ಷ ಅವರನ್ನು ಒಳಗೊಂಡ ತಜ್ಞರ ಸಮಿತಿಯನ್ನು ಸರ್ಕಾರ ರಚನೆ ಮಾಡಿತ್ತು. ಇದೀಗ ತನಿಖೆ ನಡೆಸಿದ ತಂಡ ಸಾವಿಗೆ ಕಾರಣವೇನು ಎಂದು ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಐವಿ ಗ್ಲೂಕೋಸ್ ನೀಡಿರುವುದೇ ಗರ್ಭಿಣಿಯರ ಸಾವಿಗೆ ಕಾರಣ ಎಂದು ತನಿಖಾ ತಂಡ ವರದಿ ನೀಡಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ.