ಮದ್ದೂರು: ಜೆಡಿಎಸ್ ಸಂಘಟನೆ ಮಾಡುವ ಜವಾಬ್ದಾರಿ ನನ್ನ ಹೆಗಲಿಗೆ ಬಂದಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡುವುದಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ತಂದೆ ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾದ ನಂತರ ದೇಶಾದ್ಯಂತ ಕೆಲಸ ಮಾಡಬೇಕಾದ ಜವಾಬ್ದಾರಿ ಹೆಚ್ಚಾಗಿದೆ.
ಹೀಗಾಗಿ ಪಕ್ಕ ಸಂಘಟಿಸಲು ಅವರಿಗೆ ಸಮಯಾವಕಾಶ ಸಿಗುವುದು ಕಷ್ಟವಾಗಿದೆ ಎಂದರು. ಈಗ ಜೆಡಿಎಸ್ ಪಕ್ಷದ ಸಂಘಟನೆ ನನ್ನ ಹೆಗಲಿಗೆ ಬಂದಿದೆ. ಅದನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ವಿಶೇಷವಾಗಿ ಮಂಡ್ಯ, ಹಾಸನ ಸೇರಿದಂತೆ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇನೆ. ಈ ಸಂಬಂಧ ನಾನು ಈಗಾಗಲೇ ಪಟ್ಟಿ ಸಿದ್ಧಪಡಿಸಿಕೊಂಡಿದ್ದೇನೆ ಎಂದರು.
Food Safety: ಆಹಾರದಲ್ಲಿ ಕೃತಕ ಬಣ್ಣ ಬಳಸುವುದರಿಂದ ಏನೆಲ್ಲಾ ಆರೋಗ್ಯ ಸಮಸ್ಯೆಗಳಿದೆ ಗೊತ್ತಾ..? ಇಲ್ಲಿದೆ ಮಾಹಿತಿ
ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಅಳಿವು ಉಳಿವಿನ ಬಗ್ಗೆ ಕಾಂಗ್ರೆಸ್ ನಾಯಕರು ಲಘುವಾಗಿ ಮಾತನಾಡಿದ್ದರು. ಜಿಲ್ಲೆಯ ಜನರು ಹಾಗೂ ಮದ್ದೂರು ಕ್ಷೇತ್ರದ ಮತದಾರರು ಚುನಾವಣೆಯಲ್ಲಿ ಕುಮಾರಸ್ವಾಮಿ ಅವರಿಗೆ ಅತಿ ಹೆಚ್ಚು ಮತ ನೀಡಿ ಬೆಂಬಲಿಸುವ ಮೂಲಕ ಕಾಂಗ್ರೆಸ್ ನಾಯಕರ ಟೀಕೆ ಟಿಪ್ಪಣಿಗಳಿಗೆ ತಕ್ಕ ಉತ್ತರ ನೀಡುವುದರೊಂದಿಗೆ ಜೆಡಿಎಸ್ ಪಕ್ಷಕ್ಕೆ ಮತ್ತಷ್ಟು ಬಲ ನೀಡಿದ್ದಾರೆ. ಇದಕ್ಕೆ ದೇವೇಗೌಡರ ಇಡೀ ಕುಟುಂಬ ಚಿರಋಣಿಯಾಗಿದೆ ಎಂದರು.