ಬೆಂಗಳೂರು:- ನಾನೇನು ಕಮ್ಮಿ ಎಂಬಂತೆ ಕಂದಾಯ ಸಚಿವರು ಸಿಎಂ ಕುರ್ಚಿಗೆ ಟವಲ್ ಹಾಕಿದ್ದಾರೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ನಾನೇನು ಕಮ್ಮಿ ಎಂಬಂತೆ ಕಂದಾಯ ಸಚಿವರು ಸಿಎಂ ಕುರ್ಚಿಗೆ ಟವಲ್ ಹಾಕಿದ್ದಾರೆ ಎಂದರು.
ಅತಿ ಬುದ್ಧಿವಂತಿಕೆ ಪ್ರದರ್ಶನ ಮಾಡುವ ಮೂಲಕ ಹೈಕಮಾಂಡ್ ಗಮನ ಸೆಳೆದು ಮುಖ್ಯಮಂತ್ರಿ ಕುರ್ಚಿಗೆ ನನ್ನದೂ ಒಂದು ಇರಲಿ ಅಂತ ಕಂದಾಯ ಸಚಿವ ಕೃಷ್ಣ ಬೈರೇಗೌಡ ಟವಲ್ ಹಾಕುತ್ತಿದ್ದಾರೆ. ರೈತರ ಬಗ್ಗೆ ಕೀಳರಿಮೆ ಇರುವ ಕೃಷ್ಣ ಭೈರೇಗೌಡರು ಐದು ವರ್ಷಗಳ ಕಾಲ ಕೃಷಿ ಸಚಿವರಾಗಿದ್ದು ಈ ರಾಜ್ಯದ ದೌರ್ಭಾಗ್ಯ ಎಂದರು.
ನನ್ನನ್ನು ನಿಂದಿಸುವ ಭರದಲ್ಲಿ ಕಡಲೆಕಾಯಿ ಬೆಳೆಯುವ ಸಾಮಾನ್ಯ ರೈತನಿಗೆ ಇರುವಷ್ಟು ‘ಕನಿಷ್ಠ ಜ್ಞಾನ’ ಎಂದು ರೈತರನ್ನು ಕೃಷ್ಣ ಭೈರೇಗೌಡರು ಹೀಯಾಳಿಸಿದ್ದಾರೆ. ಎಲ್ಲರಿಗೂ ಅವರಂತೆ ವಿದೇಶಕ್ಕೆ ಹೋಗಿ ವಿದ್ಯಾಭ್ಯಾಸ ಮಾಡಿಕೊಂಡು ಬರುವಷ್ಟು ಅನುಕೂಲ ಇರುವುದಿಲ್ಲ. ರಾಜಕಾರಣದಲ್ಲಿ ಕುಟುಂಬದ ಹಿನ್ನೆಲೆ ಇಲ್ಲದಂತಹ ನಮ್ಮಂತಹ ಸಾಮಾನ್ಯರೂ ಇದ್ದೀವಿ. ರೈತರ ಬಗ್ಗೆ ಇಂತಹ ಕೀಳರಿಮೆ ಇರುವ ತಮ್ಮಂತಹವರು ಐದು ವರ್ಷಗಳ ಕಾಲ ರಾಜ್ಯದ ಕೃಷಿ ಸಚಿವರಾಗಿದ್ದೀರಲ್ಲ, ಅದೇ ನಮ್ಮ ರಾಜ್ಯದ ದೌರ್ಭಾಗ್ಯ ಎಂದು ಅಶೋಕ್ ಹೇಳಿದ್ದಾರೆ.