ಕೋಲಾರ : ರಾಜ್ಯದಲ್ಲಿ ಮುಂದಿನ ವಾರವೇ ಹೆಚ್ಚುವರಿ ಅಕ್ಕಿಯ ಹಣ ನಿಮ್ಮ ಖಾತೆಗೆ ಜಮಾ ಆಗಲಿದೆ ಎಂದು ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಅವ್ರು ಹೇಳಿದರು. ಕೋಲಾರ ನಗರದ ಕಾಂಗ್ರೆಸ್ ನಗರಾಧ್ಯಕ್ಷ ಪ್ರಸಾದ್ ಬಾಬು ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವ್ರು,
ರಾಜ್ಯದಲ್ಲಿ ಅನ್ನವಾಗ್ಯ ಯೋಜನೆಯ ಹಣವನ್ನು ಪ್ರತಿ ತಿಂಗಳು 10 ರಂದು ಬಿಡುಗಡೆ ಮಾಡಲಾಗುತ್ತಿತ್ತು. ಆದರೆ ಸರ್ವರ್ ಸಮಸ್ಯೆಯಿಂದ ಈಗ ಬಿಡುಗಡೆ ಮಾಡಲಾಗಲಿಲ್ಲ. ಹೀಗಾಗಿ ಮುಂದಿನ ವಾರ ಈ ಹಣ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.
ದಕ್ಷಿಣ ಭಾರತದಲ್ಲಿ ಅದರಲ್ಲಿ ನಮ್ಮ ರಾಜ್ಯದಲ್ಲೇ 80% ರಷ್ಟು ಬಡತವಿದೆ. ಬಡತನ ರೇಖೆಗಿಂತ ಕಡಿಮೆ ಇರುವವರಿಗೆ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುತ್ತಿದೆ. ಅರ್ಹಲ್ಲದವರೂ ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಪರಿಶೀಲಿಸಲಾಗುತ್ತಿದ್ದು ಕಂಡುಬಂದಲ್ಲಿ ಅವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ, ಎಪಿಎಲ್ ಕಾರ್ಡ್ ಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಹೇಳಿದರು.