ರಾಯಚೂರು: ಹೋಳಿ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ ಮನೆ ಮಾಡಿದೆ. ಹೋಳಿ ಆಚರಣೆ ಬಳಿಕ ಸ್ನಾನಕ್ಕೆಂದು ಕೆರೆಗೆ ತೆರಳಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆಯ ಸುಲ್ತಾನಪುರ ಗ್ರಾಮದ ಹೊರವಲಯದ ಹೊಂಡದಲ್ಲಿ ಮುಳುಗಿ ಓರ್ವ ಸಾವನ್ನಪಿದ್ದಾರೆ. ಜಾಗೀರವೆಂಕಟಾಪುರ ಗ್ರಾಮದ ಸೋಮನಗೌಡ (45) ಮೃತರಾಗಿದ್ದು, ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೂ ರಾಯಚೂರು ತಾಲೂಕಿನ ಆರ್ಡಿಎಸ್ ಕಾಲುವೆಗೆ ಸ್ನಾನಕ್ಕೆಂದು ಹೋಗಿದ್ದ ಯರಗೇರಾ ಗ್ರಾಮದ ಮಹಾದೇವ (30) ಕೂಡ ನೀರುಪಾಲಾಗಿದ್ದಾರೆ. ಶನಿವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದೆ. ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.