ವಯನಾಡು: ಕೇರಳಕ್ಕೆ ಪ್ರಳಯ ರುದ್ರನಾಗಿ ಕಾಡಿದ ವರುಣ ಕೊಟ್ಟ ಪೆಟ್ಟು ಅಂತಿದ್ದಲ್ಲ. ಹಸಿರ ವನರಾಶಿಯ ನಡುವೆ ನಳನಳಿಸುತ್ತಿದ್ದ ಗ್ರಾಮಗಳಲ್ಲಿ ಈಗ ಸ್ಮಶಾನಮೌನ. ಜಲಸಮಾಧಿಯಾದವರ ಮನ ಕಲುಕುವ ಕಥೆಗಳನ್ನು ಕೇಳಿದರೆ ಎಂಥವರ ಕಣ್ಣನ್ನು ಒದ್ದೆ ಮಾಡುತ್ತಿವೆ. ಪ್ರಕೃತಿ ಮಾತೆಯ ಅರ್ಧ ಸೆಕೆಂಡ್ ಮುನಿಸಿಗೆ ನೂರು ಜನರ ಬದುಕು ಮುಗಿದಿದೆ. ನೂರಾರು ಮನೆಗಳಲ್ಲಿ ಕಣ್ಣೀರ ಕೋಡಿ ಹರಿದಿದೆ.
ಮಲ್ಪಾಡಿಯಲ್ಲಿ ಇರುವ ಸರ್ಕಾರಿ ಆಸ್ಪತ್ರೆಯ ಶವಾಗಾರವನ್ನು ತಾತ್ಕಾಲಿಕವಾಗಿ ಸಭಾಂಗಣಕ್ಕೆ ಶಿಫ್ಟ್ ಮಾಡಲಾಗಿದೆ. ಏಕೆಂದರೆ ನೂರು ನೂರು ಹೆಣದ ರಾಶಿಗೆ ಜಾಗ ಬೇಕಲ್ವಾ? ತಮ್ಮವರ ಹೆಣ ಕಂಡ ಕೂಡಲೇ ಕೆಲವರು ಮುಗಿಲು ಮುಟ್ಟುವ ರೀತಿ ಅಳುತ್ತಾರೆ. ಅಂಬುಲೆನ್ಸ್ನಲ್ಲಿ ಬಂದ ಹೆಣ ತಮ್ಮವರದಲ್ಲ ಎಂದಾಗ ಅಯ್ಯೋ ನಮ್ಮವರ ಹೆಣ ಸಿಗುತ್ತೋ ಇಲ್ವೋ ಅಂತಾ ಒದ್ದಾಡುತ್ತಾರೆ. ಆದರೆ ಈ ಎರಡು ಸ್ಥಿತಿ ಇರದ ಒಂದಷ್ಟು ದೇಹಗಳು ಶವಾಗಾರ ಸೇರಿವೆ.
PM Usha Scholarship: PUC ಪಾಸಾದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ₹20,000 ಆರ್ಥಿಕ ನೆರವು.! ಇಂದೇ ಅರ್ಜಿ ಸಲ್ಲಿಸಿ
ದೇಹವೇ ಇರದ ಆರು ಬರೀ ಕೈಗಳು ಇದುವರೆಗೆ ಸಿಕ್ಕಿದೆ. ಇದು ಯಾರ ಯಾರ ಕೈ? ಪತ್ತೆ ಮಾಡುವುದು ಹೇಗೆ? ಇನ್ನೂ ಮೂರು ತಲೆ ಸಿಕ್ಕಿವೆ. ಆದರೆ ಮುಖದ ಗುರುತೇ ಸಿಗದ ಮಟ್ಟಕ್ಕೆ ಮುಖ ಜಜ್ಜಿವೆ. ಇವು ಯಾರ ತಲೆ ಅಂತಾ ಯಾರಿಗೆ ಗೊತ್ತಾಗುತ್ತೆ? ಹೀಗೆ ಎಂಟು ಪ್ರತ್ಯೇಕವಾದ ಕಾಲು ಸಿಕ್ಕಿವೆ. ಐದು ತಲೆ ಇರದ ಅರ್ಧ ದೇಹ ಸಿಕ್ಕಿವೆ. ಎಲ್ಲವನ್ನೂ ತಂದು ಎನ್ಡಿಆರ್ಎಫ್ನವರು ಶವಗಾರ ಸೇರಿಸಿದ್ದಾರೆ. ಇದನ್ನು ನೋಡುತ್ತಿದ್ದರೆ ವಿಧಿ ಎಂಥಾ ಕ್ರೂರಿ ಅನ್ನಿಸುತ್ತೆ.
ಬಹುತೇಕರದು ಸ್ವಂತ ಮನೆ. ಮನೆ ಜೊತೆಯೆ ಸಮಾಧಿಯಾದ್ರು!
ಚೂರಲ್ಮಲ ಊರಿನ ನಸೀಬು ಹೀಗಿತ್ತೇನೋ. ಸಮೃದ್ಧ ಊರು ಎಂಬ ಪಟ್ಟ. ಜೊತೆಗೆ ಇಲ್ಲಿದ್ದವರೆಲ್ಲ ಬಡತನದಲ್ಲೇ ಸುಖ ಉಂಡವರು. ಎಲ್ಲಾದಕ್ಕಿಂತಾ ಹೆಚ್ಚಾಗಿ ಶೇ.98 ಭಾಗದ ಜನ ಇಲ್ಲಿ ತಮ್ಮ ಸ್ವಂತ ಮನೆಗಳಲ್ಲೇ ವಾಸವಿದ್ದರು. ಇನ್ನೊಂದು ಎರಡು ವರ್ಷ ಕಳೆದಿದ್ದರೆ ಶೇ.100ಕ್ಕೆ 100 ರಷ್ಟು ಜನ ಸ್ವಂತ ಮನೆ ಹೊಂದಿರುತ್ತಿದ್ದರು.