ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಕ್ರಮ ಬೋರ್ವೆಲ್ ಸದ್ದು ಮಾತ್ರ ನಿಂತಿಲ್ಲ.. ಅಕ್ರಮ ಬೋರ್ವೆಲ್ಗಳಿಗೆ ಸಂಬಂಧಿಸಿ ಕಳೆದ 45 ದಿನಗಳಲ್ಲಿ 36 ಪ್ರಕರಣಗಳನ್ನು ದಾಖಲಿಸಿರುವುದು ತಿಳಿದುಬಂದಿದೆ. ಅಂತರ್ಜಲ ಮಟ್ಟ ಕುಸಿದಿರುವ ಕಾರಣ, ಹೊಸ ಬೋರ್ವೆಲ್ ಕೊರೆಯಿಸುವುದಿದ್ದರೆ ಪೂರ್ವಾನುಮತಿ ಪಡೆಯಬೇಕು ಎಂದು ಮಾರ್ಚ್ನಲ್ಲಿ ಜಲ ಮಂಡಳಿ ಆದೇಶ ಹೊರಡಿಸಿತ್ತು.
ಬೋರ್ವೆಲ್ ಕೊರೆಯುವಿಕೆಗೆ ಸಂಬಂಧಿಸಿದ ದೂರುಗಳ ಬಗ್ಗೆ ಅಧಿಕಾರಿಗಳು ಗಮನಹರಿಸುತ್ತಿದ್ದಾರೆ ಮತ್ತು ಸಮಸ್ಯೆಗಳನ್ನು ಪರಿಹರಿಸುತ್ತಿದ್ದಾರೆ ಎಂದು ಜಲ ಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ವಿ ತಿಳಿಸಿದ್ದಾರೆ.
ಕ್ರಮ ಕೈಗೊಳ್ಳುವ ವಿಚಾರದಲ್ಲಿ ನಾವು ಸಾರ್ವಜನಿಕ ದೂರುಗಳನ್ನು ಅವಲಂಬಿಸಿರುತ್ತೇವೆ. ಏಕೆಂದರೆ ನಾವು ಎಲ್ಲಾ ಪ್ರದೇಶಗಳನ್ನು ಪರಿಶೀಲಿಸುವುದು ವಾಸ್ತವದಲ್ಲಿ ಮತ್ತು ಪ್ರಾಯೋಗಿಕವಾಗಿ ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ದೂರುಗಳು ಬಂದ ಪ್ರದೇಶಗಳಿಗೆ ನಮ್ಮ ಅಧಿಕಾರಿಗಳು ಭೇಟಿ ನೀಡುತ್ತಿದ್ದಾರೆ. ಅಲ್ಲಿ ಬೋರ್ವೆಲ್ ಕೊರೆಯುವಿಕೆಯನ್ನು ತಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.