ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಅವರು ವಿಧಾನಸಭೆಯಲ್ಲಿ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದಾರೆ.
ಕರ್ನಾಟಕ ಸರ್ಕಾರವು ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಮತ್ತೊಮ್ಮೆ ಹೆಚ್ಚಿಸಲು ಪ್ರಸ್ತಾಪಿಸಿರುವುದಾಗಿ ವರದಿಯಾಗಿತ್ತು. ಪ್ರತಿ 650 ಮಿಲಿ ಬಿಯರ್ ಬಾಟಲಿಗೆ 8-10 ರೂ. ವರೆಗೆ ದರ ಹೆಚ್ಚಾಗಲಿದೆ ಎಂದು ನಿರೀಕ್ಷಿಸಲಾಗಿದೆ. ‘ಕರ್ನಾಟಕ ಅಬಕಾರಿ (ಅಬಕಾರಿ ಸುಂಕ ಮತ್ತು ಶುಲ್ಕಗಳು) ನಿಯಮಗಳು, 1968’ಕ್ಕೆ ತಿದ್ದುಪಡಿ ಮಾಡಲು ಕರಡು ಅಧಿಸೂಚನೆ ರೂಪಿಸಲಾಗಿದ್ದು, ಇದರಲ್ಲಿ ದರ ಹೆಚ್ಚಳವನ್ನು ಪ್ರಸ್ತಾಪಿಸಲಾಗಿತ್ತು. ದರ ಹೆಚ್ಚಳಕ್ಕೆ ಅವಕಾಶ ನೀಡುವ ಹೊಸ ನಿಯಮಗಳು ಈ ತಿಂಗಳ ಕೊನೆಯಲ್ಲಿ ಅಥವಾ ಫೆಬ್ರವರಿ ಆರಂಭದಲ್ಲಿ ಅಂತಿಮಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದ್ದವು.