ಬೆಂಗಳೂರು:- ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದು, ಆ.17ರಂದು ವಿಶೇಷ ಸಾಂದರ್ಭಿಕ ರಜೆ ನೀಡಿ ಆದೇಶ ಹೊರಡಿಸಿದೆ.
ಪಿಕಪ್ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು!
ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವೃಂದ ಸಂಘಗಳ ವತಿಯಿಂದ ಆ.17ರಂದು ನಗರದ ಅರಮನೆ ಆವರಣದಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಕಾರ್ಯಾಗಾರ ಆಯೋಜಿಸಲಾಗಿದೆ.
ಹೀಗಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಕೂಲವಾಗಲೆಂದು ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ.
ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ. ಬಿ ಸುತ್ತೋಲೆ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವೃಂದ ಸಂಘಗಳ ವತಿಯಿಂದ ಆ.17ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ ಅಭಿನಂದನೆ ಹಾಗೂ ಕಾರ್ಯಾಗಾರ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ನೌಕರರು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.