ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಆರೋಪ ಒಪ್ಪಿಕೊಂಡಿದ್ದಾರೆ. ಈ ಮೂಲಕ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ಶುರುವಾಗಿದೆ.
ರಾತ್ರಿ ಮಲಗಿದ್ದ ಮಗಳ ನೋಡಿ ಮನಸ್ಸು ಚಂಚಲ: ಅಪ್ರಾಪ್ತ ಮಗಳ ಮೇಲೆ ರೇಪ್ ಗೆ ಯತ್ನಿಸಿದ ಅಪ್ಪ!
ಮುಡಾ ಸೈಟ್ ಪ್ರಕರಣವನ್ನು ಬಯಲಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆರ್ ಟಿಐ ಕಾರ್ಯಕರ್ತ ಗಂಗರಾಜು ಅವರಿಗೆ ಬೆದರಿಕೆ ಹಾಕಲ್ಪಟ್ಟಿರುವ ಆರೋಪ ವ್ಯಕ್ತವಾಗಿದೆ.
ಬೆಂಗಳೂರು-ಮೈಸೂರು ಮುಖ್ಯರಸ್ತೆಯಲ್ಲಿ ಬೈಕ್ ಗಳಲ್ಲಿ ಬಂದಿದ್ದ ಅಪರಿಚಿತರು ಬೆದರಿಕೆ ಹಾಕಿದ್ದಾರೆ ಎಂದು ಗಂಗರಾಜು ಆರೋಪ ಮಾಡಿದ್ದಾರೆ. ಹೀಗಾಗಿ ಪ್ರಕರಣ ಹೈಕೋರ್ಟ್ ನಲ್ಲಿ ವಿಚಾರಣಾ ಹಂತದಲ್ಲಿರುವಾಗಲೇ ಬೆದರಿಕೆ ಹಾಕಲ್ಪಟ್ಟಿರುವ ವಿಚಾರ ಇಡೀ ಪ್ರಕರಣಕ್ಕೆ ಮತ್ತೊಂದು ತಿರುವು ಕೊಡುವ ಸಾಧ್ಯತೆ ಇದೆ.
ಇದೇ ವೇಳೆ ಗಂಗರಾಜು ಸೇರಿದಂತೆ ದೂರುದಾರರಿಗೆ ಸಿಎಂ ಕಡೆಯಿಂದ ಅಥವಾ ಸಿಎಂ ಹೆಸರಿನಲ್ಲಿ ಅಪಾಯ ಉಂಟಾಗುವ ಆತಂಕ ವ್ಯಕ್ತಪಡಿಸಿರುವ ಬಿಜೆಪಿ ಸೂಕ್ತ ರಕ್ಷಣೆ ಕೊಡುವಂತೆ ಆಗ್ರಹಿಸಿದೆ. ಇನ್ನು ಸಿಎಂ ಸಿದ್ದರಾಮಯ್ಯ ಪತ್ನಿಗೆ 50:50 ಅನುಪಾತದಲ್ಲಿ ಸೈಟ್ ಕೊಟ್ಟಿದ್ದು ತಪ್ಪು ಎಂದು ಅಧಿಕೃತವಾಗಿ ಸರ್ಕಾರ ಒಪ್ಪಿಕೊಂಡಿದೆ. ಈ ಒಂದು ಆದೇಶ ಸಿಎಂಗೆ ಮುಳ್ಳಾಗುತ್ತಾ ಎಂಬ ಪ್ರಶ್ನೆ ಎದುರಾಗಿದೆ.
ಈ ಮಧ್ಯೆ ಹಿಂದಿನ ಆಯುಕ್ತರಾಗಿದ್ದ ಜಿ.ಟಿ. ದಿನೇಶ್ ಕುಮಾರ್ ರನ್ನು ಅಮಾನತು ಮಾಡಿ ರಾಜ್ಯ ಸರ್ಕಾರವೇ ಹೊರಡಿಸಿರುವ ಆದೇಶ ಈಗ ಸಿಎಂಗೆ ತಲೆನೋವಾಗುವ ಸಾಧ್ಯತೆಗಳಿವೆ. ಆರಂಭದಿಂದಲೂ 50:50 ರ ಅನುಪಾತದಲ್ಲಿ ಸೈಟ್ ಹಂಚಿಕೆ ಆಗಿದೆ ಎಂಬ ಆರೋಪವನ್ನು ವಿಪಕ್ಷ ಬಿಜೆಪಿ ಮಾಡುತ್ತಲೇ ಬಂದಿತ್ತು. ಆದರೆ ನಿನ್ನೆ ಹೊರಡಿಸಲ್ಪಟ್ಟಿರುವ ಅಮಾನತು ಆದೇಶದಲ್ಲಿ 50:50 ಅನುಪಾತದಲ್ಲಿ ನಿಯಮ ಬಾಹಿರವಾಗಿ ನಡೆದುಕೊಂಡಿರುವ ಕಾರಣವನ್ನು ಕೊಡಲಾಗಿದೆ. ಇದರಿಂದಾಗಿ ಬಿಜೆಪಿ ಮತ್ತು ದೂರುದಾರರ ಆರೋಪವನ್ನು ರಾಜ್ಯ ಸರ್ಕಾರವೇ ಒಪ್ಪಿಕೊಂಡಂತಾಗಿದೆ.