ಚಿಕ್ಕಮಗಳೂರು: ಹಿಂದೆ ಅತಿವೃಷ್ಟಿ ಉಂಟಾದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರು ಡಬ್ಬ ಹಿಡಿದು ರಸ್ತೆಗಿಳಿದು ಸಾರ್ವಜನಿಕರಿಂದ ಹಣ ಸಂಗ್ರಹಿಸಿದ್ದರು. ಅಂತಹಾ ಕಾಳಜಿ, ಬದ್ಧತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೋರುತ್ತಿಲ್ಲ. ಭಾಷಣಮಾಡುವುದು, ಕುಣಿಯುವುದರಲ್ಲಿಯೇ ಕಾಲವನ್ನ ದೂಡುತ್ತಿದ್ದಾರೆಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ಸಿದ್ದರಾಮಯ್ಯ ಹಾಗೂ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಯನ್ನ ಸಮರ್ಪಕವಾಗಿ ಎದುರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದರು.
Kolar: ಹುಡುಗಿಗೆ ಮೆಸೇಜ್ ಕಳಿಸಿದ್ದೇ ಕೊಲೆಗೆ ಕಾರಣವಾಯ್ತಾ..? ಐಜಿಪಿ ರವಿಕಾಂತೇಗೌಡ ಹೇಳೋದೇನು?
ರಾಜ್ಯದಲ್ಲಿ 30% ಕ್ಕಿಂತ ಕಡಿಮೆ ಮಳೆಯಾಗಿರುವ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಈಗಾಗಲೇ ಘೋಷಿಸಲಾಗಿದೆ. ಬರ ರಾಜ್ಯವನ್ನು ವ್ಯಾಪಕವಾಗಿ ಕಾಡುತ್ತಿದೆ. ಬೆಳೆ ನಷ್ಟವಾಗಿದೆ. ಮೇವಿನ ಅಭಾವ ಉಂಟಾಗಿದೆ. ಕುಡಿಯುವ ನೀರಿನ ಸಮಸ್ಯೆ ಶುರುವಾಗಿದೆ. ಇದಕ್ಕೂ ಸರ್ಕಾರಕ್ಕೂ ಸಂಬಂಧಿವಿಲ್ಲವೆಂಬಂತೆ ಮುಖ್ಯಮಂತ್ರಿಗಳು ವರ್ತಿಸುತ್ತಿದ್ದಾರೆಂದು ಆರೋಪಿಸಿದ್ದಾರೆ. ಬರದ ನೈಜ ಸ್ಥಿತಿಯನ್ನ ಅರಿಯಲು ಬಿಜೆಪಿ (BJP) ರಾಜ್ಯ ಪ್ರವಾಸಕೈಗೊಂಡಿದೆ. ಬರದ ವರದಿಯನ್ನ ಕೇಂದ್ರ ಸರ್ಕಾರಕ್ಕೆ ಕಳುಹಿಸಿ ಕೊಡಲಾಗುವುದು ಎಂದರು.