ಹುಬ್ಬಳ್ಳಿ:- ಕಾಂಗ್ರೆಸ್ ಸರ್ಕಾರ ಇರುವ ರಾಜ್ಯಗಳಲ್ಲಿ ದೌರ್ಜನ್ಯ ಹೆಚ್ಚಳವಾಗಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಬೆಳಗಾವಿ ತಾಲ್ಲೂಕಿನ ಹೊಸ ವಂಟಮೂರಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ, ಹಲ್ಲೆ ಮಾಡಿದ ಪ್ರಕರಣ ನಾಗರಿಕ ಸಮಾಜ ತಲೆ ತಗ್ಗಿಸುವಂತದ್ದು. ಕಾಂಗ್ರೆಸ್ ಸರ್ಕಾರ ಇರುವ ರಾಜ್ಯಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚುತ್ತಿವೆ’ ಎಂದರು.
ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ, ಮಹಿಳೆಯರಿಗೆ ರಕ್ಷಣೆ ಒದಗಿಸಲು ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
ದೇಶದ ಪ್ರಜಾಪ್ರಭುತ್ವ ಮಂದಿರಕ್ಕೆ ಕಳಂಕ ತರಲು ವ್ಯವಸ್ಥಿತವಾಗಿ ಸಂಚು ರೂಪಿಸಿ ಸಂಸತ್ ಭವನದಲ್ಲಿ ಹೊಗೆ ಬಾಂಬ್ ಸಿಡಿಸಲಾಗಿದೆ. ಪ್ರಕರಣ ಸಂಬಂಧ ಸ್ಪೀಕರ್ ಅವರು ಉನ್ನತಮಟ್ಟದ ತನಿಖೆಗೆ ಆದೇಶ ನೀಡಿದ್ಧಾರೆ. ಈಗಾಗಲೇ ತನಿಖೆ ಆರಂಭವಾಗಿದೆ. ಈ ರೀತಿಯ ಘಟನೆಗಳಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ. ಎಲ್ಲರೂ ಒಂದಾಗಿ ಎದುರಿಸಬೇಕು’ ಎಂದರು.