ಮೈಸೂರು:- ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಶುರು ಮಾಡಿದೆ ಎಂದು ಸಚಿವ ವಿ ಸೋಮಣ್ಣ ಹೇಳಿದ್ದಾರೆ.
ರಸ್ತೆ ಅಪಘಾತ: ಕಂಟೇನರ್ ಲಾರಿ-ಕ್ರೂಸರ್ ನಡುವೆ ಡಿಕ್ಕಿ, ತಪ್ಪಿದ ಅನಾಹುತ!
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಟಿ ರವಿ ಅಶ್ಲೀಲ ಪದ ಬಳಕೆ ಆರೋಪ ಪ್ರಕರಣ ನಾನಾ ಸ್ವರೂಪ ಮತ್ತು ಪೊಲಿಟಿಕಲ್ ಟರ್ನ್ ಪಡೆದುಕೊಳ್ಳುತ್ತಿರುವ ಮಧ್ಯೆ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಪ್ರಕರಣ ಬೆಳಸಬಾರದು ಎಂಬ ನಿಲ್ಲುವಿತ್ತು ಎಂದರು.
ಪ್ರಕರಣ ವಿಚಾರವಾಗಿ ಅವರ ನಿಲ್ಲುವು ಏನಿತ್ತು ಎಂಬುದನ್ನು ತಮ್ಮ ಆತ್ಮಸಾಕ್ಷಿಯಾಗಿ ಹೇಳಿ ಎಂದು ಸವಾಲು ಹಾಕಿದ್ದಾರೆ. ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಶುರು ಮಾಡಿದೆ. ಸ್ಪೀಕರ್ ತನಿಖೆ ಮಾಡಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಿ ನಮ್ಮದೇನು ಅಭ್ಯಂತರ ಇಲ್ಲ. ನಮ್ಮದೇ ತಪ್ಪಾಗಿದ್ದರು ನಾವು ಅದನ್ನು ಸ್ವೀಕರಿಸುತ್ತೇವೆ. ಅದು ಬಿಟ್ಟು ಸಿ.ಟಿ.ರವಿಗೆ ಟಾರ್ಚರ್ ಕೊಟ್ಟಿದ್ದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದ್ದಾರೆ.