ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಗೊಳಿಸಿ ವಾಹನ ಸವಾರರಿಗೆ ಶಾಕ್ ನೀಡಿದೆ. ಪೆಟ್ರೋಲ್, ಡಿಸೇಲ್ ಮೇಲಿನ ಟ್ಯಾಕ್ಸ್ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಿಟೇಲ್ ಸೇಲ್ಸ್ ಟ್ಯಾಕ್ಸ್ ದರ ಹೆಚ್ಚಳ ಮಾಡಲಾಗಿದೆ.
ಟ್ಯಾಕ್ಸ್ ಹೆಚ್ಚಳ ಹಿನ್ನೆಲೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳವಾಗಿದೆ. ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್- 25.92% ಇದ್ದದ್ದು, ಈಗ 29.84% ಗೆ ಏರಿಕೆ (3.9% ಹೆಚ್ಚಳ)ಯಾಗಿದೆ. ಅಂತೆಯೇ ಡಿಸೇಲ್ ಈ ಹಿಂದೆ- 14.34% ಇದ್ದದ್ದು, ಈಗ 18.44%ಗೆ ಏರಿಕೆ ಕಂಡಿದೆ (4.1% ರಷ್ಟು ಏರಿಕೆ).
6 ತಿಂಗಳಲ್ಲಿ ನಿಮ್ಮ ಆದಾಯವನ್ನು ಹೆಚ್ಚಿಸುವ ಬೆಳ್ಳುಳ್ಳಿ ಬಗ್ಗೆ ಇಲ್ಲಿದೆ ಮಾಹಿತಿ.!
ಇದೀಗ ಕರ್ನಾಟಕ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಬೆಲೆ ಏರಿಕೆ ಮಾಡಿದೆ. ಗರಿಷ್ಠ 3.50 ರೂಪಾಯಿ ಏರಿಕೆ ಮಾಡಿ ಜನಸಾಮಾನ್ಯರಿಗೆ ಶಾಕ್ ನೀಡಿದೆ. ಸದ್ಯದ ಬೆಲೆ ಏರಿಕೆಯಿಂದ ಅಗತ್ಯವಸ್ತುಗಳ ಬೆಲೆಯೂ ಏರಿಕೆಯಾಗಲಿದೆ. ಆದಾಯ ಕ್ರೋಡಿಕರಿಸಲು ರಾಜ್ಯ ಸರ್ಕಾರ ಹಲವು ಮೂಲಗಳನ್ನು ಹುಡುಕುತ್ತಿದೆ. ಇದೀಗ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ನೇರವಾಗಿ ಜನಸಾಮಾನ್ಯರಿಗೆ ತಟ್ಟಲಿದೆ.