ಬೆಂಗಳೂರು:– ನೀರಾವರಿ ಪಂಪ್ಸೆಟ್ಗಳಿಗೆ 7ತಾಸು ವಿದ್ಯುತ್, ಬೇಸಿಗೆಯಲ್ಲಿ ಪವರ್ ಸಮಸ್ಯೆ ಇರಲ್ಲ ಎಂದು ಸಚಿವ ಜಾರ್ಜ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ತೀವ್ರ ಬರದ ನಡುವೆಯೂ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಗೆ ತಕ್ಕಂತೆ ಪೂರೈಸಲು ರಾಜ್ಯ ಸರ್ಕಾರವು ಸಾಧ್ಯವಿರುವ ಎಲ್ಲ ಕ್ರಮ ಕೈಗೊಂಡಿದೆ ಎಂದರು.
ಸದ್ಯದ ಅಂಕಿ ಅಂಶದ ಪ್ರಕಾರ ರಾಜ್ಯದ ದೈನಂದಿನ ಬಳಕೆಗೆ ವಿದ್ಯುತ್ ಬೇಡಿಕೆ ಸುಮಾರು 14,000 ಮೆ ವ್ಯಾ ಮತ್ತು ನೀರಾವರಿ ಪಂಪ್ಸೆಟ್ ಸೆಟ್ಗಳಿಗೆ 4,500 ಮೆ.ವ್ಯಾ ವಿದ್ಯುತ್ ಅಗತ್ಯವಿದೆ.
ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಪ್ರಮಾಣ ಹೆಚ್ಚಳದ ಜತೆಗೆ ಸೆಕ್ಷನ್ 11 ಜಾರಿ ಹಾಗೂ ಇತರ ರಾಜ್ಯಗಳಿಂದ ವಿದ್ಯುತ್ ಮತ್ತು ಇಂಧನ ಮಾರುಕಟ್ಟೆಯಿಂದ ಖರೀದಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ನೀರಾವರಿ ಪಂಪ್ಸೆಟ್ಗಳಿಗೆ 7 ತಾಸು ವಿದ್ಯುತ್ ಪೂರೈಸುವಂತೆ ಸೂಚನೆ ನೀಡಿದ್ದಾರೆ ಎಂದು ಹೇಳಿದರು.
ಈ ವರ್ಷ ಮಳೆ ಕೊರತೆಯಿಂದಾಗಿ ಇಂಧನ ಬೇಡಿಕೆ ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಯಾರಿಗೂ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳುತ್ತೇವೆ. ಸದ್ಯ ವಿದ್ಯುತ್ ಬೇಡಿಕೆಗೆ ತಕ್ಕಂತೆ ಉತ್ಪಾದನೆ ಮಾಡಲಾಗುತ್ತಿದೆ. 2024ರ ಫೆಬ್ರವರಿ, ಮಾರ್ಚ್ ಮತ್ತು ಏಪ್ರಿಲ್ನಲ್ಲಿ ಸರಾಸರಿ ವಿದ್ಯುತ್ ಬೇಡಿಕೆ ಸುಮಾರು 15,500 ಮೆ.ವ್ಯಾ ನಿಂದ 16,500 ಮೆ.ವ್ಯಾ ತಲುಪುವ ನಿರೀಕ್ಷೆಯಿದೆ ಎಂದು ಹೇಳಿದರು.