ಹುಬ್ಬಳ್ಳಿ:- ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಹಿಂದೂ ಮುಸ್ಲಿಂ ನಡುವೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
Bengaluru: ರಸ್ತೆ ಅಪಘಾತ; ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್ಗೆ ಮೂವರು ಬಲಿ!
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಸಂಭವಿಸಿದ ಗಲಭೆಗೆ ರಾಜ್ಯ ಸರ್ಕಾರವೇ ಹೊಣೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ನೀತಿಯಿಂದ ಗಲಭೆ ಆಗಿದೆ. ನಾಗಮಂಗಲದಲ್ಲಿ ದೊಡ್ಡ ಪ್ರಮಾಣದಲ್ಲಿ ಗಲಾಟೆ ಸಂಭವಿಸಿದೆ ಎಂದರು.
ಗಣೇಶ ಮೂರ್ತಿ ಇದ್ದರೂ ಕಲ್ಲು ಹೊಡೆದು ಬೆಂಕಿ ಹಚ್ಚಿದ್ದಾರೆ. ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ನೀತಿ ಅನುಸರಿಸದೆ ಮತಾಂಧ ಶಕ್ತಿಯನ್ನು ಹತ್ತಿಕ್ಕಬೇಕಿದೆ. ಹಿಂದೂ ವಿರೋಧಿ ನೀತಿಯಿಂದ ಈ ರೀತಿ ಘಟನೆಗಳು ಆಗುತ್ತಿದೆ. ಇದಕ್ಕೆಲ್ಲ ರಾಜ್ಯ ಸರ್ಕಾರವೇ ಹೊಣೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.