ತುಮಕೂರು: ರಾಜ್ಯದ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನ ತುಮಕೂರಿಗೆ ಕೊಡಬೇಕು ಎಂದು ಸಿಎಂ, ಡಿಸಿಎಂಗೆ ವೇದಿಕೆಯಲ್ಲೇ ಗೃಹ ಸಚಿವ ಜಿ. ಪರಮೇಶ್ವರ್ ಮನವಿ ಮಾಡಿದ್ದಾರೆ. ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ತುಮಕೂರು ಜಿಲ್ಲೆ ಬಹಳ ವೇಗವಾಗಿ ಬೆಳೆಯಲಿ. ತುಮಕೂರು ಜಿಲ್ಲೆಗೆ ಮೆಟ್ರೋ ರೈಲು ಬರುವ ಕಾಮಗಾರಿಯ ಡಿಪಿಆರ್ ನಡೀತಿದೆ ಎಂದರು.
ಅಲ್ಲದೇ ತುಮಕೂರು, ಬೆಂಗಳೂರಿನಿಂದ ಕೇವಲ 65 ಕಿಮಿ ದೂರದಲ್ಲಿದೆ. ಹಾಗಾಗಿ ತುಮಕೂರಿಗೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಬೇಕು. ರಾಜ್ಯದ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನ ಇಲ್ಲಿಗೆ ಕೊಡಬೇಕು ಎಂದು ಸಿಎಂ, ಡಿಸಿಎಂಗೆ ವೇದಿಕೆಯಲ್ಲೇ ಮನವಿ ಮಾಡಿದರು.
ನಿಮಗೆ ಗೊತ್ತೆ..? ವೀಸಾ ಬೇಡ, ಭಾರತೀಯ Passport ಒಂದಿದ್ದರೆ ಸಾಕು ಈ ದೇಶಗಳಿಗೆ ಹೋಗಬಹುದು!
ತುಮಕೂರು ಜಿಲ್ಲೆಯಲ್ಲಿ ಇವತ್ತಿನ ಕಾರ್ಯಕ್ರಮ ಇತಿಹಾಸ ಸೃಷ್ಟಿ ಮಾಡಿದೆ. ಇವತ್ತು 1,250 ಕೋಟಿ ರೂ. ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. 1.5 ಲಕ್ಷ ಫಲಾನುಭವಿಗಳಿಗೆ ಸವಲತ್ತು ಹಂಚಿಕೆಯಾಗಿದೆ. ಕಂದಾಯ ಇಲಾಖೆಯಿಂದ 2 ಸಾವಿರ ಹಕ್ಕು ಪತ್ರ ಕೊಟ್ಟಿದ್ದೇವೆ. 891 ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದ್ದೇವೆ. ತುಮಕೂರು ಬೆಂಗಳೂರಿನ ಭಾಗವಾಗಿ ಅಭಿವೃದ್ಧಿಯಾಗುತ್ತಿದೆ ಎಂದು ಶ್ಲಾಘಿಸಿದರು.