ಶಿವಮೊಗ್ಗ: ಕಾಂಗ್ರೆಸ್ ನಿಂದ ಬಿಜೆಪಿಗೆ ಹೋದವರ ಸ್ಥಿತಿ ಯೂಸ್ ಅಂಡ್ ಥ್ರೋ ಥರ ಆಗಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನಾವು ಬೇರೆ ಪಕ್ಷದ ಒಳ ಜಗಳ ಇಟ್ಟುಕೊಂಡು ರಾಜಕಾರಣ ಮಾಡುತ್ತಿಲ್ಲ. ನಮ್ಮ ರಾಜಕಾರಣ ಜನರು ನಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಂಡು ಹೋಗುವುದು. ಅವರ ಒಳ ಜಗಳವನ್ನ ಮುಚ್ಚಿಕೊಳ್ಳಲು ನಮ್ಮ ಸರ್ಕಾರದ ಮೇಲೆ ಪ್ರಯೋಗ ಮಾಡುತ್ತಿದ್ದಾರೆ. ಅವರದು ಯಾವಾಗಲೂ ಇದ್ದದ್ದೇ, ಜನ ಅವರಿಗೆ ಕೆಲಸ ಕೊಟ್ಟಿದ್ದಾರೆ. ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವ ಕೆಲಸ ಕೊಟ್ಟಿದ್ದಾರೆ. ಅವರಿಗೆ ಅಧಿಕಾರ ಕೊಟ್ಟಾಗ ಆಡಳಿತ ನಡೆಸುವ ಅನುಭವ ಕೂಡ ಇರಲಿಲ್ಲ. ಕಾಂಗ್ರೆಸ್ ನಿಂದ ಹೋದವರಿಗೆ ಅಲ್ಲಿ ಯಾವ ಸ್ಥಾನಮಾನವೂ ಇಲ್ಲ, ಅಲ್ಲಿ ಅವರನ್ನು ಯೂಸ್ ಅಂಡ್ ಥ್ರೋ ಮಾಡಿದ್ದಾರೆ. ಇದು ಈಗ ಎಲ್ಲರಿಗೂ ಗೊತ್ತಾಗುತ್ತಿದೆ. ಯೂಸ್ ಅಂಡ್ ಥ್ರೋ ಮಾಡಿದವರ ಹೆಸರು ನಮ್ಮ ಬಳಿ ಇದೆ ಆದರೆ ಅದನ್ನು ನಾವು ಹೇಳಲು ಹೋಗುವುದಿಲ್ಲ ಎಂದ್ರು
ಮೈಕ್ರೋ ಫೈನಾನ್ಸ್ ವಿರುದ್ಧ ಸುಗ್ರೀವಾಜ್ಞೆ ಮೂಲಕ ಕ್ರಮ : ಸಚಿವ ಎಂ.ಬಿ.ಪಾಟೀಲ್
ಇನ್ನೂ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ವಿಚಾರವಾಗಿ ಮಾತನಾಡಿ ಅವರ ನೋವು ಹಾಗೂ ಸಮಸ್ಯೆಯನ್ನು ಅವರು ಹೇಳಿಕೊಳ್ಳುತ್ತಿದ್ದಾರೆ. ಈಗಾಗಲೇ ಸರ್ಕಾರ ಅವರ ಬೇಡಿಕೆಗೆ ಸ್ಪಂದಿಸಿದೆಕೆಲವೊಂದು ಘೋಷಣೆಗಳನ್ನು ಕೂಡ ಮಾಡಿದೆ ಎಂದರು. ಇನ್ನೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರ ನೀಡದೇ ಹೋದರು.