ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ನಟನೆಯ ತಾಂಡೇಲ್ ಸಿನಿಮಾ ಶೂಟಿಂಗ್ ಕಂಪ್ಲೀಟ್ ಮಾಡಿದ್ದು ಬಿಡುಗಡೆಗೆ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ನಿನ್ನೆ ಹೈದರಾಬಾದ್ನಲ್ಲಿ ಪ್ರೀರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಆದ್ರೆ ಕೊನೆ ಕ್ಷಣದಲ್ಲಿ ಕಾರ್ಯಕ್ರಮ ರೆದ್ದು ಮಾಡಲಾಗಿದೆ. ಅಂದ ಹಾಗೆ ಇದಕ್ಕೆಲ್ಲಾ ಕಾರಣ ನಟ ಹಾಗೂ ಶಾಸಕ ನಂದಮೂರಿ ಬಾಲಕೃಷ್ಣ.
ಇತ್ತೀಚೆಗಷ್ಟೇ ನಂದಮೂರಿ ಬಾಲಕೃಷ್ಣ ಅವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿದೆ. ನಂದಮೂರಿ ಬಾಲಕೃಷ್ಣ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿರುವ ಖುಷಿಯನ್ನು ಸಂಭ್ರಮಿಸಲು ಅವರ ಕುಟುಂಬದವರು ದೊಡ್ಡ ಪಾರ್ಟಿ ಆಯೋಜನೆ ಮಾಡಿದ್ದರು. ಈ ಸಂಭ್ರಮದ ಕಾರ್ಯಕ್ರಮವನ್ನು ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಪತ್ನಿ, ಬಾಲಯ್ಯ ಸಹೋದರಿ ನಾರಾ ಭುವನೇಶ್ವರಿ ಆಯೋಜನೆ ಮಾಡಿದ್ದರು.
ಬಾಲಯ್ಯ ಅವರಿಗಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ತೆಲುಗು ಚಿತ್ರರಂಗದ ಎಲ್ಲ ಗಣ್ಯರನ್ನು ಆಪ್ತರನ್ನು ಆಹ್ವಾನಿಸಲಾಗಿತ್ತು. ಮೆಗಾಸ್ಟಾರ್ ಚಿರಂಜೀವಿ, ಅಲ್ಲು ಅರ್ಜುನ್ ಸೇರಿದಂತೆ ಹಲವು ದೊಡ್ಡ ದೊಡ್ಡ ನಟರು, ನಟಿಯರಿಗೆ ಈ ಕಾರ್ಯಕ್ರಮಕ್ಕೆಆಹ್ವಾನ ಇತ್ತು. ಬಾಲಯ್ಯ ಅವರ ಸಂಭ್ರಮಾಚರಣೆ ಕಾರ್ಯಕ್ರಮ ಇರುವ ಕಾರಣದಿಂದಾಗಿ ‘ತಾಂಡೆಲ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಅನ್ನು ಒಂದು ದಿನಗಳ ಕಾಲ ಚಿತ್ರತಂಡ ಮುಂದೂಡಿದೆ.
ಇಂದು (ಫೆಬ್ರವರಿ 02) ‘ತಾಂಡೆಲ್’ ಸಿನಿಮಾ ಪ್ರೀ ರಿಲೀಸ್ ಇವೆಂಟ್ ಹೈದರಾಬಾದ್ನಲ್ಲಿ ನಡೆಯಲಿದೆ. ಅನ್ನಪೂರ್ಣ ಸ್ಟುಡಿಯೋದಲ್ಲಿ ಪ್ರೀ ರಿಲೀಸ್ ಇವೆಂಟ್ ನಡೆಯಲಿದ್ದು, ಯಾವುದೇ ಅಭಿಮಾನಿಗಳಿಗೆ ಈ ಕಾರ್ಯಕ್ರಮಕ್ಕೆ ಪ್ರವೇಶ ಇರುವುದಿಲ್ಲ. ಸಂಧ್ಯಾ ಥಿಯೇಟರ್ ದುರ್ಘಟನೆ ಆದ ಬಳಿಕ ಇದೇ ಮೊದಲ ಬಾರಿಗೆ ಅಲ್ಲು ಅರ್ಜುನ್ ಅವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳಲಿದ್ದಾರೆ.