ಬೇಸಿಗೆ ಆರಂಭಕ್ಕೆ ಇನ್ನೂ ಕೆಲ ದಿನಗಳು ಭಾಕಿ ಇದೆ. ಆದರೆ ಅದಕ್ಕೂ ಮುನ್ನವೇ ನೆತ್ತಿ ಸುಡುವ ಬಿಸಿಲಿಗೆ ಜನ ಹೈರಾಣಾಗಿದ್ದಾರೆ. ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತಾಪ ಏರಿಕೆ ಆಗುತ್ತಿದ್ದು ಜನ ಕಂಗಾಲಾಗಿದ್ದಾರೆ. ಕಾರವಾರ, ಕಲಬುರಗಿ, ರಾಯಚೂರು, ಬೀದರ್ ಭಾಗದಲ್ಲಿ ಬಿಸಿಲು ದಾಖಲೆಯನ್ನೇ ಬರೆಯುತ್ತಿದೆ.
ಇಂದು ಉತ್ತರ ಕರ್ನಾಟಕ ಭಾಗದಲ್ಲಿ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ನತ್ತ ದಾಪುಗಾಲು ಇಟ್ಟಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ ಇಂದು ದಾಖಲಾಗಿರುವ ಗರಿಷ್ಠ ಉಷ್ಣಾಂಶ, ಕಳೆದ 15 ವರ್ಷಗಳ ಬಳಿಕ ಫೆಬ್ರವರಿ ತಿಂಗಳಲ್ಲಿ ದಾಖಲಾದ ಅತ್ಯಧಿಕ ಗರಿಷ್ಠ ಉಷ್ಣಾಂಶ ಎಂದು ಭಾರತೀಯ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಿದೆ.
ಹೊನ್ನಾವರ – 38.5°ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕಾರವಾರ – 38.0°ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಪಣಂಬೂರು – 37.8°ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕಲಬುರಗಿ – 37.6°ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ – 36.9°ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಬೆಳಗಾವಿ ಏರ್ಪೋರ್ಟ್ – 35.3°ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಬಾಗಲಕೋಟೆ – 35.3°ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.