ಸ್ಯಾಂಡಲ್ವುಡ್ ನಲ್ಲಿ ಕರಾವಳಿ ಭಾಗದ ಸಂಸ್ಕೃತಿ ಸಾರುವ ಮತ್ತೊಂದು ಸಿನಿಮಾ ಸಖತ್ ಸದ್ದು ಮಾಡುತ್ತಿದೆ.
‘ಕರಾವಳಿ’ ಹೆಸರಿನಲ್ಲೇ ಹೊಸ ಸಿನಿಮಾ ಅನೌನ್ಸ್ ಆಗಿದ್ದು ಸದ್ಯ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಆಗಿದೆ.
ವಿಶೇಷ ಎಂದರೆ ಕರಾವಳಿ ಭಾಗದ ಬಗ್ಗೆಯೇ ಇರುವ ಈ ಸಿನಿಮಾದ ಟೀಸರ್ ಅನ್ನು ಮಂಗಳೂರಿನಲ್ಲಿ ಅದ್ದೂರಿಯಾಗಿ ಲಾಂಚ್ ಮಾಡಲಾಯಿತು.
ಅಂದಹಾಗೆ ‘ಕರಾವಳಿ’ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸುತ್ತಿರುವ ಸಿನಿಮಾ.
ಈ ಚಿತ್ರಕ್ಕೆ ಗುರುದತ್ ಗಾಣಿಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ‘ಅಂಬಿ ನಿಂಗೆ ವಯಸ್ಸಾಯ್ತೋ’ ಸಿನಿಮಾಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ಗುರುದತ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ 2ನೇ ಸಿನಿಮಾ ಇದಾಗಿದೆ.