ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಹಾಗೂ ಸಂಗಡಿಗರಿಗೆ ಕೋರ್ಟ್ ಹೈಕೋರ್ಟ್ ಪೂರ್ಣ ಪ್ರಮಾಣದ ಜಾಮೀನು ಮಂಜೂರು ಮಾಡಿದೆ. ಜಾಮೀನು ಸಿಕ್ಕ ಖುಷಿಯಲ್ಲಿರೋ ನಟ ದರ್ಶನ್ಗೆ ಇದೀಗ ಮತ್ತೊಂದು ಶಾಕಿಂಗ್ ನ್ಯೂಸ್ ಸಿಕ್ಕಿದೆ. ಹೈಕೋರ್ಟ್ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ಬೆಂಗಳೂರು ಪೊಲೀಸ್ರು ನಿರ್ಧಾರಕ್ಕೆ ಬಂದಿದ್ದಾರೆ. ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಸಿದ್ಧರಾಗಿದ್ದು, ಗೃಹ ಇಲಾಖೆಯಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದ 17 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಇದೀಗ ಏಳು ಆರೋಪಿಗಳು ಜಾಮೀನು ಪ್ರಶ್ನಿಸಲು ಪೊಲೀಸರು ಮುಂದಾಗಿದ್ದಾರೆ. ಪೊಲೀಸ್ ಇಲಾಖೆ ನಿರ್ಧಾರಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಈಗಾಗಲೇ ಸುಪ್ರೀಂಕೋರ್ಟ್ಗೆ ವಕೀಲರಾಗಿ ಅನಿಲ್ ಸಿ. ನಿಶಾನಿ ನೇಮಕ ಆಗಿದ್ದು, ರಾಜ್ಯ ಸರ್ಕಾರವೇ ಈ ಬಗ್ಗೆ ಆದೇಶ ಹೊರಡಿಸಿದೆ. ನಟ ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್, ಪ್ರದೂಶ್, ನಾಗರಾಜು, ಅನುಕುಮಾರ್, ಜಗದೀಶ್ಗೆ ಇದೀಗ ಹೊಸ ಸಂಕಷ್ಟ ಶುರುವಾಗಿದೆ.
ಇನ್ನು, ಮೇಲ್ಮನವಿ ಸಲ್ಲಿಸಲು ಅನುಮತಿ ಸಿಕ್ಕ ಬೆನ್ನಲ್ಲೆ ಪೊಲೀಸರು ಕಡತಗಳನ್ನು ಗೃಹ ಇಲಾಖೆಗೆ ರವಾನಿಸಿದ್ದಾರೆ. ಹೈಕೋರ್ಟ್ ನೀಡಿರುವ ಜಾಮೀನು ರದ್ದು ಕೋರಿ ಮೇಲ್ಮನವಿ ಸಲ್ಲಿಕೆ ಆಗಲಿದ್ದು, ಚಾರ್ಜ್ಶೀಟ್ ಕನ್ನಡದಿಂದ ಇಂಗ್ಲಿಷ್ಗೆ ಭಾಷಾಂತರ ಮಾಡಲಾಗಿದೆ. ಇಂದು ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಕೆ ಆಗಲಿದೆ.