ಬೆಂಗಳೂರು:- ಖಾಲಿ ಆಗುವ ಸಿಎಂ ಸ್ಥಾನಕ್ಕೆ ಹಗ್ಗ ಜಗ್ಗಾಟ ಶುರುವಾಗಿದೆ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಮುಖ್ಯಮಂತ್ರಿಗಳು ಹಾಗೂ ಅವರ ಕುಟುಂಬ ಭ್ರಷ್ಟಾಚಾರದಲ್ಲಿ ನೇರವಾಗಿ ಭಾಗಿಯಾಗಿರುವ ಕಾರಣ ಸಿಎಂ ಅವರು ನಿಶ್ಚಿತವಾಗಿ ರಾಜೀನಾಮೆ ಕೊಡಲಿದ್ದಾರೆ ಎಂದರು.
ಮೆದುಳಿನ ಕ್ಯಾನ್ಸರ್ ಗೆ ಮೊಬೈಲ್ ಫೋನ್ ಕಾರಣವಾ!? ಈ ಸುದ್ದಿ ನೀವು ಓದಲೇಬೇಕು!
ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನ ಇಲ್ಲ. ದಿನ ಬೆಳಗಾದರೆ, ನಾನೂ ಮುಖ್ಯಮಂತ್ರಿ ಆಗ್ಬೇಕು. ನನಗೂ ಆಸೆ ಇದೆ. ನಾನೇನೂ ಸನ್ಯಾಸಿ ಅಲ್ಲ ಎಂದು ಅನೇಕ ಕಾಂಗ್ರೆಸ್ ಮುಖಂಡರು ಹೇಳಿಕೆ ನೀಡುತ್ತಿದ್ದಾರೆ. ಎಂ.ಬಿ ಪಾಟೀಲ್, ಬಸವರಾಜ ರಾಯರೆಡ್ಡಿ, ಆರ್.ವಿ.ದೇಶಪಾಂಡೆ ಮೊದಲಾದವರು ಹೇಳಿಕೆ ಕೊಟ್ಟಿದ್ದಾರೆ. ಮತ್ತೊಂದು ಕಡೆ ಇಂಥ ಹೇಳಿಕೆ ನಿಲ್ಲಿಸಲು ಸೂಚಿಸುವಂತೆ ಕಾಂಗ್ರೆಸ್ ಮುಖಂಡರೇ ಅವರ ಹೈಕಮಾಂಡ್ಗೆ ಪತ್ರ ಬರೆದಿದ್ದಾರೆ ಎಂದರು.
ಕಾಂಗ್ರೆಸ್ ಹೈಕಮಾಂಡ್ ಆಶೀರ್ವಾದದಿಂದಲೇ ಕಾಂಗ್ರೆಸ್ಸಿನ ಹಿರಿಯ ನಾಯಕರು ಹೇಳಿಕೆ ಕೊಡುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಈಗಾಗಲೇ ಹಗ್ಗಜಗ್ಗಾಟ ಶುರುವಾಗಿದೆ. ಯಾವುದೇ ಸಂದರ್ಭದಲ್ಲಿ ಬೇಕಾದರೂ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದರು.