ಬೆಂಗಳೂರು: ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ (World Cup Cricket Final) ಆಸ್ಟ್ರೇಲಿಯಾ (Australia) ವಿರುದ್ಧ ಭಾರತ (Team India) ಸೋತ ಬಳಿಕ ವಿರಾಟ್ ಕೊಹ್ಲಿ (Virat Kohli) ಬೇಸರಗೊಂಡ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಆಸ್ಟ್ರೇಲಿಯಾ ಆಟಗಾರರು ಮೈದಾನದಲ್ಲಿ ಸಂಭ್ರಮಿಸುತ್ತಿದ್ದರೆ ಕೊಹ್ಲಿ ತಲೆ ಕೆಳಗೆ ಹಾಕಿ ಕೈಯಲ್ಲಿದ್ದ ಹ್ಯಾಟ್ನಿಂದ ವಿಕೆಟ್ ಬೇಲ್ಸ್ ಬೀಳಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಸತತ 10 ಪಂದ್ಯಗಳನ್ನು ಗೆದ್ದಿದ್ದ ಭಾರತ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡವಾಗಿತ್ತು. ಫೈನಲ್ ಪಂದ್ಯದಲ್ಲಿ ಟಾಸ್ ಸೋತ ಭಾರತ ಬ್ಯಾಟಿಂಗ್ ಆರಂಭಿಸಿತು
ಬ್ಯಾಟ್ಸ್ಮನ್ಗಳು ನಿರೀಕ್ಷಿತ ಮಟ್ಟದ ಬ್ಯಾಟಿಂಗ್ ನೀಡದ ಕಾರಣ ಭಾರತ 50 ಓವರ್ಗಳಲ್ಲಿ 240 ರನ್ ಹೊಡೆಯಿತು. ರೋಹಿತ್ ಶರ್ಮಾ (Rohit Sharma) 47 ರನ್, ವಿರಾಟ್ ಕೊಹ್ಲಿ 54 ರನ್, ಕೆಎಲ್ ರಾಹುಲ್ 66 ರನ್ ಹೊಡೆದು ಔಟಾದರು.
ಸುಲಭ ಸವಾಲನ್ನು ಬೆನ್ನಟ್ಟಿದ ಆಸ್ಟೇಲಿಯಾ 43 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 241 ರನ್ ಹೊಡೆದು 6 ವಿಕೆಟ್ಗಳ ಜಯ ಸಂಪಾದಿಸಿತು.
ಆರಂಭಿಕ ಆಟಗಾರ ಟ್ರಾವಿಸ್ ಹೆಡ್ 137 ರನ್ ಹೊಡೆದು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ 765 ರನ್ ಹೊಡೆದ ವಿರಾಟ್ ಕೊಹ್ಲಿ ಅರ್ಹವಾಗಿಯೇ ಸರಣಿ ಶ್ರೇಷ್ಠ ಗೌರವಕ್ಕೆ ಪಾತ್ರವಾದರು.